ಸೋಮವಾರಪೇಟೆ, ಆ. ೧೨: ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಪಟ್ಟಣದ ಪೊಲೀಸ್ ಠಾಣೆ ಹಾಗೂ ಆಸ್ಪತ್ರೆಯಲ್ಲಿ ರಕ್ಷಾಬಂಧನ ಆಚರಿಸಲಾಯಿತು.

ಮಹಿಳಾ ಮೋರ್ಚಾದ ಸದಸ್ಯರು ಪೊಲೀಸ್ ಠಾಣೆಗೆ ತೆರಳಿ ಸಿಬ್ಬಂದಿಗಳಿಗೆ ರಕ್ಷೆ ಕಟ್ಟಿ ಶುಭಾಶಯ ಕೋರಿದರು. ಅಂತೆಯೇ ಆಸ್ಪತ್ರೆಗೆ ತೆರಳಿ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ರಕ್ಷೆ ಕಟ್ಟಲಾಯಿತು. ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಸುಬ್ರಮಣಿ, ಪ್ರಧಾನ ಕಾರ್ಯದರ್ಶಿ ತಂಗಮ್ಮ, ಭುವನೇಶ್ವರಿ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.