ಸುಂಟಿಕೊಪ್ಪ, ಆ. ೧೨: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕ ಸಂಘದ ಕೊಡಗು ಜಿಲ್ಲಾ ಮತ್ತು ತಾಲೂಕು ಘಟಕಗಳ ಪದಾಧಿಕಾರಿಗಳ ನಿಯೋಗ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರನ್ನು ಭೇಟಿ ಮಾಡಿ ಕುಂದುಕೊರತೆಗಳ ಬಗ್ಗೆ ವಿವರಿಸಿತು.

ಶಿಕ್ಷಕರ ಎಲ್ಲಾ ಸಮಸ್ಯೆಗಳ ಪಟ್ಟಿಯನ್ನು ತಯಾರಿಸಿ ನೀಡುವಂತೆ ಸಂಘದ ಪದಾಧಿಕಾರಿಗಳಿಗೆ ಸೂಚಿಸಿದ ಶಾಸಕರು, ಸಮಸ್ಯೆಗಳ ಬಗ್ಗೆ ಸಂಬAಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಬಗೆಹರಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕ ಸಂಘದ ಕೊಡಗು ಜಿಲ್ಲಾಧ್ಯಕ್ಷ ಸಿ.ಟಿ. ಸೋಮಶೇಖರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ.ಟಿ. ದಯಾನಂದ ಪ್ರಕಾಶ್, ಸೋಮವಾರಪೇಟೆ ತಾಲೂಕು ಘಟಕದ ಅಧ್ಯಕ್ಷ ಡಿ.ಪಿ. ಧರ್ಮಪ್ಪ, ಕಾರ್ಯದರ್ಶಿ ಕೆ.ಆರ್. ರತ್ನಕುಮಾರ, ಖಜಾಂಚಿ ಟಿ.ವಿ. ಶೈಲಾ, ಲೆಕ್ಕ ಪರಿಶೋಧಕ ಎನ್. ಪ್ರಕಾಶ್ ಮತ್ತಿತರು ಇದ್ದರು.