ಜಗತ್ತಿಗೆ ಸಹಾಯ ಮಾಡಿದ ಕೀರ್ತಿ ಭಾರತಕ್ಕಿದೆ
ನವದೆಹಲಿ, ಆ. ೧೪: ಪ್ರಜಾಪ್ರಭುತ್ವದ ನಿಜವಾದ ಸಾಮರ್ಥ್ಯ ತಿಳಿಯಲು ಜಗತ್ತಿಗೆ ಸಹಾಯ ಮಾಡಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ ಎಂದು ರಾಷ್ಟçಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ರಾಷ್ಟçಪತಿ ದ್ರೌಪದಿ ಮುರ್ಮು ಅವರು ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ರಾಷ್ಟçವನ್ನುದ್ದೇಶಿಸಿ ಮಾಡಿದ ಚೊಚ್ಚಲ ಭಾಷಣದಲ್ಲಿ, ಹಲವು ವಿಚಾರಗಳ ಕುರಿತು ಮಾತನಾಡಿದ್ದಾರೆ. ದೇಶದ ಆರ್ಥಿಕತೆ ಕ್ಷಿಪ್ರ ಗತಿಯಲ್ಲಿ ಪ್ರಗತಿ ಕಾಣುತ್ತಿದೆ. ಸ್ವಾತಂತ್ರ್ಯ ದಿನವನ್ನು ಆಚರಿಸುವಾಗ ನಾವು ಭಾರತೀಯತೆಯನ್ನು ಆಚರಿಸುತ್ತೇವೆ. ಭಾರತವು ವೈವಿಧ್ಯತೆಯಿಂದ ಕೂಡಿದೆ. ‘ಏಕ ಭಾರತ, ಶ್ರೇಷ್ಠ ಭಾರತ' ಎಂಬ ಪರಿಕಲ್ಪನೆಯು ಒಗ್ಗಾಟ್ಟಾಗಿ ಮುಂದೆ ಸಾಗಲು ಪ್ರೇರೇಪಿಸುತ್ತದೆ ಎಂದು ಹೇಳಿದರು. ೭೬ನೇ ಸ್ವಾತಂತ್ರ್ಯ ದಿನದ ಈ ಸಂದರ್ಭದಲ್ಲಿ ವಸಾಹತುಶಾಹಿ ಆಡಳಿತದಿಂದ ದೇಶವನ್ನು ಮುಕ್ತಗೊಳಿಸಿದ ಸ್ವಾತಂತ್ರ್ಯ ಹೋರಾಟಗಾರರ ಅಪಾರ ತ್ಯಾಗವನ್ನು ದ್ರೌಪದಿ ಮುರ್ಮು ಸ್ಮರಿಸಿದರು. 'ಸ್ವಾತಂತ್ರ್ಯ ದಿನವು ನಮ್ಮೆಲ್ಲರಿಗೂ ಮಾತ್ರವಲ್ಲದೆ ಪ್ರಪಂಚದಾದ್ಯAತದ ಪ್ರತಿಯೊಬ್ಬ ಪ್ರಜಾಪ್ರಭುತ್ವದ ಪ್ರತಿಪಾದಕರಿಗೂ ಸಂಭ್ರಮಾಚರಣೆಯಾಗಿದೆ. ಭಾರತವು ಸ್ವಾತಂತ್ರ್ಯವನ್ನು ಗೆದ್ದಾಗ, ಪ್ರಜಾಪ್ರಭುತ್ವದ ಸರ್ಕಾರದ ಯಶಸ್ಸಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ ಅನೇಕ ಅಂರ್ರಾಷ್ಟಿçÃಯ ನಾಯಕರು ಮತ್ತು ತಜ್ಞರು ಇದ್ದರು. ಅವರು ಅನುಮಾನಿಸಲು ಕಾರಣಗಳಿದ್ದವು. ಕೋವಿಡ್ ಸಂಕಷ್ಟದ ಬಳಿಕ ಭಾರತವು ಶಿಪ್ರ ಗತಿಯಲ್ಲಿ ಪ್ರಗತಿ ಸಾಧಿಸುತ್ತಿರುವುದನ್ನು ಜಗತ್ತು ಗಮನಿಸುತ್ತಿದೆ. ಪ್ರಾದೇಶಿಕ ಅಸಮಾನತೆ ಕಡಿಮೆಯಾಗುತ್ತಿದೆ. ಲಿಂಗ ಅಸಮಾನತೆ ಕಡಿಮೆಯಾಗುತ್ತಿದೆ. ಹೆಣ್ಣು ಮಕ್ಕಳು ದೇಶದ ಭವಿಷ್ಯದ ದೊಡ್ಡ ಭರವಸೆಯಾಗಿದ್ದಾರೆ. ಆಧುನಿಕ ಭಾರತದ ನಿರ್ಮಾಪಕರು ಪ್ರತಿಯೊಬ್ಬ ವಯಸ್ಕ ನಾಗರಿಕರಿಗೂ ರಾಷ್ಟç ನಿರ್ಮಾಣದ ಸಾಮೂಹಿಕ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅನುವು ಮಾಡಿಕೊಟ್ಟ ಮತ್ತು ಭಾರತವನ್ನು ಹೊಂದಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ ಎಂದು ಪ್ರತಿಪಾದಿಸಿದರು.
೭೫ ಎಲೆಕ್ಟಿçಕ್ ಬಸ್ಗಳ ಲೋಕಾರ್ಪಣೆ!
ಬೆಂಗಳೂರು, ಆ. ೧೪: ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ೭೫ ಎಲೆಕ್ಟಿçಕ್ ಬಸ್ಗಳನ್ನು ಲೋಕಾರ್ಪಣೆ ಮಾಡಿದರು. ವಿಧಾನಸೌಧದ ಮೆಟ್ಟಿಲುಗಳ ಮುಂಭಾಗ ಬಸ್ಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿದ ಅವರು, ಸಾರಿಗೆ ಅಭಿವೃದ್ಧಿಯ ಅಂಗವಾಗಿದೆ. ಸಾರಿಗೆ ಇಲ್ಲದೆ ನಾವು ಜೀವನವನ್ನು ಯೋಚನೆ ಮಾಡೋಕು ಆಗಲ್ಲ. ಸರ್ಕಾರಕ್ಕೆ ಸಾರಿಗೆ ಬಗ್ಗೆ ಚಿಂತನೆ ಅವಶ್ಯಕತೆ ಇದೆ. ಗ್ರಾಮೀಣ ಸಾರಿಗೆ ಪ್ರತಿಯೊಂದು ಹಳ್ಳಿಗೂ ಮುಟ್ಟಬೇಕಾಗುತ್ತದೆ. ನಗರದಲ್ಲಿ ಒಂದು ಕಿ.ಮೀ. ಕಡಿಮೆ ಇದ್ದರೂ ಪ್ರಯಾಣ ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಿದರು. ಬಿಎಂಟಿಸಿಗೆ ೨೫ ವರ್ಷ ತುಂಬಿದೆ. ಬಸ್ಗಳ ನಿರ್ವಹಣೆಯಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಮೊದಲಿಗೆ ಲಾಭದಾಯಕವಾಗಿದ್ದ ಬಿಎಂಟಿಸಿ ಕೋವಿಡ್ನಿಂದ ನಷ್ಟಕ್ಕೀಡಾಗಿವೆ. ಅದನ್ನು ಮತ್ತೆ ಮೇಲೆತ್ತುವ ಕೆಲಸ ಸರ್ಕಾರ ಮಾಡುತ್ತಿದೆ. ಬಿಎಂಟಿಸಿಯ ೫ ಸಾವಿರ ಗಾಡಿಗಳು ಬೆಂಗಳೂರಿನಲ್ಲಿ ಓಡಾಡುತ್ತವೆ. ೧.೨೫ ಲಕ್ಷ ಜನಸಂಖ್ಯೆ ಇರುವ ಬೆಂಗಳೂರಿನಲ್ಲಿ ಇನ್ನೂ ಮೂರುವರ್ಷದಲ್ಲಿ ಜನಸಂಖ್ಯೆಗಿAತ ಮೂರರಷ್ಟು ಗಾಡಿಗಳಿರುತ್ತವೆ. ಬೆಂಗಳೂರು ಜನಸಂಖ್ಯೆ ಬೆಳೆಯುತ್ತಿದೆ. ಬೆಂಗಳೂರಿಗರ ಸಾರಿಗೆ ವ್ಯವಸ್ಥೆಯ ಯೋಜನೆ ರೂಪಿಸಬೇಕಿದೆ. ಬೆಂಗಳೂರಿನ ಬೆಳವಣಿಗೆ ಎಲ್ಲಾ ದಿಕ್ಕುಗಳಲ್ಲು ಆಗುವಂತೆ ಸರ್ಕಾರ ಮಾಡಬೇಕಾಗುತ್ತದೆ. ಇಷ್ಟರಲ್ಲೇ ಬೆಂಗಳೂರಿನ ಮೊಬಿಲಿಟಿ ಪ್ಲಾನ್ ಬರುತ್ತದೆ ಎಂದು ತಿಳಿಸಿದರು.
ಶಿಂಧೆ ಸಂಪುಟದಲ್ಲಿ ಖಾತೆ ಹಂಚಿಕೆ: ಫಡ್ನವೀಸ್ ಪಾಲಾದ ಪ್ರಮುಖ ಖಾತೆಗಳು!
ಮುಂಬೈ, ಆ. ೧೪: ಮಹಾರಾಷ್ಟçದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯ ೫ ದಿನಗಳ ಬಳಿಕ ಖಾತೆ ಹಂಚಿಕೆ ಮಾಡಲಾಗಿದೆ. ೧೮ ಸಚಿವರನ್ನು ಸಂಪುಟಕ್ಕೆ ತೆಗೆದುಕೊಂಡಿದ್ದ ಏಕನಾಥ್ ಶಿಂಧೆ ನಗರಾಭಿವೃದ್ಧಿ ಹಾಗೂ ೧೧ ಇತರ ಖಾತೆಗಳನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದು, ಪ್ರಮುಖ ಖಾತೆಗಳಾದ ಗೃಹ ಹಾಗೂ ವಿತ್ತ ಖಾತೆಗಳನ್ನು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ಗೆ ವಹಿಸಿದ್ದಾರೆ. ಇದಷ್ಟೇ ಅಲ್ಲದೇ ಫಡ್ನವೀಸ್ ಹಣಕಾಸು ಹಾಗೂ ಯೋಜನಾ ಖಾತೆಗಳನ್ನು ಪಡೆದಿದ್ದಾರೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ. ಮತ್ತೊಂದು ಪ್ರಮುಖ ಖಾತೆಯಾದ ಕಂದಾಯ ಖಾತೆಯೂ ಬಿಜೆಪಿಯ ಪಾಲಾಗಿದ್ದು, ಬಿಜೆಪಿ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ಅವರು ಕಂದಾಯ ಸಚಿವರಾಗಿದ್ದಾರೆ. ಪಾಟೀಲ್ ೨೦೧೯ ರ ವಿಧಾನಸಭಾ ಚುನಾವಣೆಗೂ ಕೆಲವೇ ತಿಂಗಳುಗಳ ಮುನ್ನ ಬಿಜೆಪಿ ಸೇರ್ಪಡೆಯಾಗಿದ್ದರು. ಸರ್ಕಾರ ರಚನೆಯಾದ ೪೧ ದಿನಗಳ ಬಳಿಕ ತಾ. ೯ ರಂದು ಸಿಎಂ ಶಿಂಧೆ ಸಚಿವ ಸಂಪುಟ ವಿಸ್ತರಣೆ ಮಾಡಿದ್ದರು.
ಮುಂಬೈ-ಪುಣೆ ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ
ಮುಂಬೈ, ಆ. ೧೪: ಮರಾಠ ಮೀಸಲಾತಿ ನಾಯಕ, ಮಾಜಿ ಎಂಎಲ್ಸಿ ವಿನಾಯಕ್ ಮೇಟೆ ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮುಂಬೈ-ಪುಣೆ ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಮಡಪ್ ಸುರಂಗದ ಸಮೀಪ ಮೇಟೆ ಅವರ ಕಾರಿಗೆ ಮತ್ತೊಂದು ವಾಹನ ಡಿಕ್ಕಿ ಹೊಡೆದಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರಿAದ ವಿನಾಯಕ್ರನ್ನು ನವಿ ಮುಂಬೈನಲ್ಲಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಹಾರಾಷ್ಟç ವಿಧಾನ ಪರಿಷತ್ನ ಮಾಜಿ ಸದಸ್ಯ ವಿನಾಯಕ್ ಮೇಟೆ ಅವರ ಭದ್ರತೆಗೆ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿ ರಾಮ್ ದೊಬ್ಲೆಗೆ ಗಂಭೀರ ಗಾಯಗಳಾಗಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮಹಾರಾಷ್ಟçದಲ್ಲಿ ಭೀಕರ ಅಪಘಾತ: ೬ ಮಂದಿ ದುರ್ಮರಣ!
ಬೀಡ್, ಆ. ೧೪: ಮಹಾರಾಷ್ಟçದ ಬೀಡ್ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ಕಾರು ಮತ್ತು ಟೆಂಪೋ ಮುಖಾಮುಖಿ ಡಿಕ್ಕಿಯಾಗಿ ಆರು ಮಂದಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮಂಜರಸುAಬ-ಪಟೋಡ ಹೆದ್ದಾರಿಯಲ್ಲಿ ಮುಂಜಾನೆ ೫.೩೦ರ ಸುಮಾರಿಗೆ ಅಪಘಾತ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕೇಜ್ ತಹಸಿಲ್ನ ಜಿವಾಚಿವಾಡಿ ಗ್ರಾಮದ ಕುಟುಂಬವೊAದು ಮದುವೆ ಸಮಾರಂಭದಲ್ಲಿ ಭಾಗವಹಿಸಲು ಪುಣೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಅವರ ವಾಹನ ಮತ್ತು ಟೆಂಪೋ ಪರಸ್ಪರ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು ೬ ಮಂದಿ ರಸ್ತೆಯ ಮೇಲೆ ಪ್ರಾಣಬಿಟ್ಟಿದ್ದಾರೆ. ಸಂತ್ರಸ್ತರನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಲ್ಗಾಮ್ನಲ್ಲಿ ಗ್ರೇನೇಡ್ ದಾಳಿ; ಪೊಲೀಸ್ ಸಿಬ್ಬಂದಿ ಹುತಾತ್ಮ
ಶ್ರೀನಗರ, ಆ. ೧೪: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಗ್ರೆನೇಡ್ ದಾಳಿಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಖೈಮೋಹ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ ಕುಲ್ಗಾಮ್ ಜಿಲ್ಲೆಯ ಖೈಮೊಹ್ನಲ್ಲಿ ಗ್ರೆನೇಡ್ ದಾಳಿ ನಡೆದಿರುವ ಘಟನೆ ವರದಿಯಾಗಿದೆ. ಈ ಭಯೋತ್ಪಾದಕ ಕೃತ್ಯದಲ್ಲಿ ಪೊಲೀಸ್ ಸಿಬ್ಬಂದಿಯಾದ ತಾಹಿರ್ ಖಾನ್ ಹುತಾತ್ಮರಾಗಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ. ದಾಳಿಯಲ್ಲಿ ಗಾಯಗೊಂಡ ಸಿಬ್ಬಂದಿಯನ್ನು ಕೂಡಲೇ ಅನಂತನಾಗ್ನ ಜಿಎಂಸಿ ಆಸ್ಪತ್ರೆಗೆ ಸ್ಥಳಾಂತರಿ ಸಲಾಯಿತು, ಅದರೆ, ಅವರು ಅಲ್ಲಿ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಲೇಖಕ ಸಲ್ಮಾನ್ ರಶ್ದಿ ಆರೋಗ್ಯದಲ್ಲಿ ಚೇತರಿಕೆ
ನ್ಯೂಯಾರ್ಕ್, ಆ. ೧೪: ನ್ಯೂಯಾರ್ಕ್ನಲ್ಲಿ ನಡೆದ ಸಾಹಿತ್ಯ ಕಾರ್ಯಕ್ರಮವೊಂದರಲ್ಲಿ ಚೂರಿ ಇರಿತಕ್ಕೆ ಒಳಗಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಲೇಖಕ ಸಲ್ಮಾನ್ ರಶ್ದಿ ಅವರನ್ನು ವೆಂಟಿಲೇಟರ್ನಿAದ ತೆಗೆಯಲಾಗಿದೆ. ಸಲ್ಮಾನ್ ರಶ್ದಿ ಅವರನ್ನು ವೆಂಟಿಲೇಟರ್ನಿAದ ಹೊರತೆಗೆದಿದ್ದು ಸದ್ಯ ಅವರೀಗ ಮಾತನಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಸಲ್ಮಾನ್ ರಶ್ದಿಯವರನ್ನು ಇರಿದ ಆರೋಪ ಹೊತ್ತಿರುವ ೨೪ ವರ್ಷದ ಹದಿ ಮತರ್, ಕೃತ್ಯದ ಬಗ್ಗೆ ತಪ್ಪಿತಸ್ಥ ಭಾವನೆ ಇಲ್ಲ ಎಂದು ಒಪ್ಪಿಕೊಂಡಿದ್ದಾನೆ. ಲೇಖಕರ ಕುತ್ತಿಗೆ ಮತ್ತು ಹೊಟ್ಟೆಗೆ ಸರಿಸುಮಾರು ೧೦ ಬಾರಿ ಇರಿದಿದ್ದಾರೆ ಎಂದು ಪ್ರಾಸಿಕ್ಯೂಟರ್ಗಳು ನ್ಯೂಯಾರ್ಕ್ ನ್ಯಾಯಾಲಯದಲ್ಲಿ ಹದಿ ಮತರ್ನ ವಿಚಾರಣೆಯ ಸಂದರ್ಭದಲ್ಲಿ ಹೇಳಿದರು. ಸಲ್ಮಾನ್ ರಶ್ದಿ ಅವರ ಮೇಲಿನ ದಾಳಿಯು ಪ್ರಪಂಚದಾದ್ಯAತ ಆಘಾತ ಮತ್ತು ಆಕ್ರೋಶವನ್ನು ಎದುರಿಸಿದೆ.