*ಗೋಣಿಕೊಪ್ಪ, ಆ. ೧೪: ರಾಷ್ಟಿçÃಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ತಾಲೂಕು ಆರೋಗ್ಯ ಇಲಾಖೆ ವೈದ್ಯಾಧಿಕಾರಿ ಡಾ. ಯತಿರಾಜ್ ಗೋಣಿಕೊಪ್ಪ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಜಂತುಹುಳು ನಿವಾರಕ ಔಷಧಿಗಳನ್ನು ವಿತರಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬಿಳಿಗಿ ಅವರ ಉಪಸ್ಥಿತಿಯಲ್ಲಿ ಗೋಣಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಮಾತನಾಡಿದ ಡಾ. ಯತಿರಾಜ್, ಮಕ್ಕಳ ಅಪೌಷ್ಟಿಕತೆ, ರಕ್ತ ಹೀನತೆಯಿಂದಾಗಿ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಕುಂಠಿತವಾಗುತ್ತದೆ. ಆದ್ದರಿಂದ ೧ ರಿಂದ ೧೯ ವರ್ಷದ ವಯಸ್ಸಿನ ಎಲ್ಲಾ ಮಕ್ಕಳಿಗೂ ಜಂತುಹುಳು ನಿವಾರಕ ಔಷಧಿಯನ್ನು ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರತಿ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುತ್ತದೆ. ಜಂತುಹುಳು ನಿವಾರಣೆಯಿಂದ ಮಕ್ಕಳು ಆರೋಗ್ಯವಂತರಾಗುತ್ತಾರೆ ಎಂದು ಹೇಳಿದರು.

ಕ್ಷೇತ್ರದ ಸಂಪನ್ಮೂಲ ಸಮನ್ವಯ ಅಧಿಕಾರಿ ವನಜಾಕ್ಷಿ, ತಾಲೂಕು ದೈಹಿಕ ಅಧೀಕ್ಷಕಿ ಗಾಯಿತ್ರಿ, ಶಾಲೆಯ ಮುಖ್ಯೋಪಾಧ್ಯಾಯ ಕುಮಾರ್ ಹೆಚ್.ಕೆ., ಶಿಕ್ಷಕರುಗಳು, ಆರೋಗ್ಯ ಇಲಾಖೆ ಸಿಬ್ಬಂದಿಗಳು ವಿದ್ಯಾರ್ಥಿಗಳು ಹಾಜರಿದ್ದರು.