ಮಡಿಕೇರಿ, ಆ. ೧೪: ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಆಶ್ರಯದಲ್ಲಿ ಮಡಿಕೇರಿಯ ಲಕ್ಷಿö್ಮÃ ನರಸಿಂಹ ಕಲ್ಯಾಣ ಮಂಟಪದ ಶತಮಾನ ಭನವದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನೆ ನಡೆಯಿತು. ಈ ಪ್ರಯುಕ್ತ ವಿದುಷಿ ಮೇಘಾ ಭಟ್ ಅವರಿಂದ ಭಕ್ತಿ ಗಾಯನ ನೆರವೇರಿತು. ವಿದ್ಯಾಭಿವೃದ್ಧಿ ನಿಧಿ ಅಧ್ಯಕ್ಷ ಗೋಪಾಲ ಕೃಷ್ಣ, ಕಾರ್ಯದರ್ಶಿ ಅರುಣ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
ನಿರ್ದೇಶಕರಾದ ಗೀತಾ ಗಿರೀಶ್ ಕಾರ್ಯಕ್ರಮ ನಿರೂಪಿಸಿದರು. ವಿಶೇಷ ಪೂಜೆ ನೆರವೇರಿಸಲಾಯಿತು.