ಮೂರ್ನಾಡು, ಆ. ೧೩: ಮೂರ್ನಾಡು ವಿದ್ಯಾಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಕೆಸರುಗದ್ದೆಯ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

ಮೂರ್ನಾಡು ವಿದ್ಯಾಸಂಸ್ಥೆಯ ಕಾರ್ಯದರ್ಶಿ ಪೆಮ್ಮುಡಿಯಂಡ ವೇಣು ಅಪ್ಪಣ್ಣ ಅವರ ಭತ್ತದ ಗದ್ದೆಯಲ್ಲಿ ಕೆಸರು ಗದ್ದೆ ಆಟೋಟ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಭತ್ತದ ಬೇಸಾಯದ ಗದ್ದೆಗಳ ಅನುಭವ ಹಾಗೂ ಕೆಸರಿನ ಅನುಭವವನ್ನು ಸಂಭ್ರಮಿಸಿದರು.

ವಿವಿಧ ರೀತಿಯ ಓಟದ ಸ್ಪರ್ಧೆಗಳನ್ನು ಹಾಗೂ ಗುಂಪು ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ ಲಘು ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು. ವಿದ್ಯಾರ್ಥಿಗಳೊಂದಿಗೆ ಶಿಕ್ಷಕ ವರ್ಗದವರು ಕೂಡ ಉತ್ಸಾಹದಿಂದ ಪಾಲ್ಗೊಂಡಿದ್ದರು.