ಮಡಿಕೇರಿ, ಆ. ೧೪: ಸ್ವಾತಂತ್ರ‍್ಯ ದಿನಾಚರಣೆಯ ಅಮೃತೋತ್ಸವದ ಪ್ರಯುಕ್ತ ಕೊಡಗು ಜಿಲ್ಲಾ ಕಾಂಗ್ರೆಸ್‌ನಿAದ ತಿರಂಗಾ ಪಾದಯಾತ್ರೆ ಮಡಿಕೇರಿಯಲ್ಲಿ ನಡೆಯಿತು.

ಗಣಪತಿ ಬೀದಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಮಾಜಿ ಸಚಿವ ಯಂ.ಸಿ. ನಾಣಯ್ಯ ಪಾದಯಾತ್ರೆಗೆ ಚಾಲನೆ ನೀಡಿದರು. ನೂರಾರು ಕಾರ್ಯಕರ್ತರು ಸ್ವಾತಂತ್ರ‍್ಯ ಹೋರಾಟಗಾರರಿಗೆ ಜೈಕಾರ ಹಾಕಿ ನಗರದ ಮುಖ್ಯ ಬೀದಿಯಲ್ಲಿ ಸಂಚರಿಸಿ ಗಾಂಧಿ ಮೈದಾನದಲ್ಲಿ ಸಭೆ ಸೇರಿದರು .

ಈ ಸಂದÀರ್ಭದಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಹಾಗೂ ಕೆಪಿಸಿಸಿ ವೀಕ್ಷಕ ಎಂ. ಲಕ್ಷಣ್ ರಾಜ್ಯ ಸರ್ಕಾರ ದಿನಪತ್ರಿಕೆಗಳಿಗೆ ನೀಡಿದ ಜಾಹೀರಾತಿನಲ್ಲಿ ಜವಹರಲಾಲ್ ನೆಹರೂ ಅವರನ್ನು ಉದ್ದೇಶಪೂರ್ವಕ ವಾಗಿ ಕೈಬಿಟ್ಟು ಅಪಮಾನಿಸಿರುವುದಾಗಿ ಆರೋಪಿಸಿದರು. ಪ್ರಾಸ್ತವಿಕವಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜಾ ಉತ್ತಪ್ಪ ಮಾತನಾಡಿದರು.

ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹೆಚ್.ಎಂ. ಚಂದ್ರಮೌಳಿ, ಕೆಪಿಸಿಸಿ ಉಸ್ತುವಾರಿ ವೆಂಕಪ್ಪ ಗೌಡ ಕಾರ್ಯ ಕ್ರಮ ಕುರಿತು ಮಾತನಾಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ. ಚಂದ್ರಕಲಾ, ಕೆ.ಎಂ. ಲೋಕೇಶ್, ಮಹಿಳಾ ಅಧ್ಯಕ್ಷೆ ಸುರಯ್ಯ ಅಬ್ರಾರ್, ಕೆಪಿಸಿಸಿ ಸಂಯೋಜಕ ಹೆಚ್.ಎಂ. ನಂದಕುಮಾರ್, ಟಾಟು ಮೊಣ್ಣಪ್ಪ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರಾ ಮೈನಾ, ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್, ಬ್ಲಾಕ್ ಅಧ್ಯಕ್ಷ ಹೆಚ್.ಎ. ಹಂಸ, ಮೀದೇರಿರ ನವೀನ್, ಬಿ.ಬಿ. ಸತೀಶ್ ಕುಮಾರ್, ಅನಂತ್ ಕುಮಾರ್, ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಮುಖಂಡರಾದ ಟಿ.ಪಿ. ರಮೇಶ್, ಪುಲಿಯಂಡ ಜಗದೀಶ್, ಚುಮ್ಮಿ ದೇವಯ್ಯ, ಉದಯ್ ಕುಮಾರ್, ಪ್ರಭುರೈ, ಅಯಿಲಪಂಡ ಪುಷ್ಪ ಪೂಣಚ್ಚ, ಲಿಯಾಕತ್ ಆಲಿ, ಜುಲೇಕಾಬಿ, ಮಮ್ತಾಜ್ ಬೇಗಂ ಸೇರಿದಂತೆ ಮುಖಂಡರು ಕಾರ್ಯಕರ್ತುರು ಭಾಗವಹಿಸಿದ್ದರು.