ಪೊನ್ನಂಪೇಟೆ, ಆ. ೧೫: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಗ್ರಂಥಾಲಯದಲ್ಲಿ ರಾಷ್ಟಿçÃಯ ಗ್ರಂಥಾಲಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭ ಪ್ರಾಂಶುಪಾಲ ಪ್ರೊ. ಎಂ.ಬಿ. ಕಾವೇರಪ್ಪ ಗ್ರಂಥಾಲಯ ಪಿತಾಮಹ ಡಾ. ಎಸ್.ಆರ್. ರಂಗನಾಥ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಂಡು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಉತ್ತಮ ಪುಸ್ತಕಗಳು ಒಳ್ಳೆಯ ಗೆಳೆಯರಿದ್ದಂತೆ ಎಂದರು.
ಈ ಸಂದÀರ್ಭ ಕಾವೇರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಸ್.ಎಸ್. ಮಾದಯ್ಯ, ಹಿರಿಯ ಉಪನ್ಯಾಸಕರಾದ ಡಾ. ಎ.ಎಸ್. ಪೂವಮ್ಮ, ಎಂ.ಬಿ. ಪದ್ಮ, ಸಿ.ಪಿ. ಸುಜಯ, ಕಚೇರಿ ಅಧೀಕ್ಷಕ ಸೋಮನಾಥ್, ಗ್ರಂಥಪಾಲಕಿ ಟಿ.ಕೆ. ಲತಾ, ಗ್ರಂಥಾಲಯ ಸಿಬ್ಬಂದಿಗಳಾದ ಅನುರಾಧ, ಮನು, ಅಂಬಿಕ, ಬೋಧಕ ವರ್ಗ, ಆಡಳಿತಾತ್ಮಕ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.