ಮಡಿಕೇರಿ, ಆ. ೧೫: ಸ್ವಾತಂತ್ರö್ಯಕ್ಕಾಗಿ ತ್ಯಾಗ - ಬಲಿದಾನಗೈದ ಮಹನೀಯರ ಆದರ್ಶವನ್ನು ಗೌರವಿಸಿ ಸಾಮರಸ್ಯದಿಂದ ಬಾಳ್ವೆ ನಡೆಸುವ ಜವಾಬ್ದಾರಿ ನಮ್ಮದಾಗಿದ್ದು, ದೇಶದ ಐಕ್ಯತೆ, ಸಮಗ್ರತೆ, ಸಂಸ್ಕೃತಿ, ಪರಂಪರೆಗಳ ರಕ್ಷಣೆಗೆ ನಾವೆಲ್ಲರೂ ಕೈಜೋಡಿಸೋಣ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಕರೆ ನೀಡಿದರು.

ಜಿಲ್ಲಾಡಳಿತದ ವತಿಯಿಂದ ನಗರದ ಕೋಟೆ ಆವರಣದಲ್ಲಿ ಏರ್ಪಡಿಸಲಾಗಿದ್ದ ಭಾರತ ಸ್ವಾತಂತ್ರö್ಯದ ಅಮೃತ ಮಹೋತ್ಸವ ಸಮಾರಂಭದಲ್ಲಿ ರಾಷ್ಟçಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಗೆ ಸಂದೇಶ ನೀಡಿದರು. ಸ್ವಾತಂತ್ರö್ಯದ ಅಮೃತ ಮಹೋತ್ಸವದ ವಿಶೇಷ ಸಂದರ್ಭದಲ್ಲಿ ಸ್ವಾತಂತ್ರೊö್ಯÃತ್ಸವ ದಿನವನ್ನು ನಾವೆಲ್ಲರೂ ಸಡಗರ - ಸಂಭ್ರಮದಿAದ ಆಚರಿಸುತ್ತಿದ್ದೇವೆ.

ಸ್ವಾತಂತ್ರö್ಯ ಹೋರಾಟದ ಶತಮಾನದ ಇತಿಹಾಸವು ದೇಶದ ಮಡಿಕೇರಿ, ಆ. ೧೫: ಸ್ವಾತಂತ್ರö್ಯಕ್ಕಾಗಿ ತ್ಯಾಗ - ಬಲಿದಾನಗೈದ ಮಹನೀಯರ ಆದರ್ಶವನ್ನು ಗೌರವಿಸಿ ಸಾಮರಸ್ಯದಿಂದ ಬಾಳ್ವೆ ನಡೆಸುವ ಜವಾಬ್ದಾರಿ ನಮ್ಮದಾಗಿದ್ದು, ದೇಶದ ಐಕ್ಯತೆ, ಸಮಗ್ರತೆ, ಸಂಸ್ಕೃತಿ, ಪರಂಪರೆಗಳ ರಕ್ಷಣೆಗೆ ನಾವೆಲ್ಲರೂ ಕೈಜೋಡಿಸೋಣ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಕರೆ ನೀಡಿದರು.

ಜಿಲ್ಲಾಡಳಿತದ ವತಿಯಿಂದ ನಗರದ ಕೋಟೆ ಆವರಣದಲ್ಲಿ ಏರ್ಪಡಿಸಲಾಗಿದ್ದ ಭಾರತ ಸ್ವಾತಂತ್ರö್ಯದ ಅಮೃತ ಮಹೋತ್ಸವ ಸಮಾರಂಭದಲ್ಲಿ ರಾಷ್ಟçಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಗೆ ಸಂದೇಶ ನೀಡಿದರು. ಸ್ವಾತಂತ್ರö್ಯದ ಅಮೃತ ಮಹೋತ್ಸವದ ವಿಶೇಷ ಸಂದರ್ಭದಲ್ಲಿ ಸ್ವಾತಂತ್ರೊö್ಯÃತ್ಸವ ದಿನವನ್ನು ನಾವೆಲ್ಲರೂ ಸಡಗರ - ಸಂಭ್ರಮದಿAದ ಆಚರಿಸುತ್ತಿದ್ದೇವೆ.

ಸ್ವಾತಂತ್ರö್ಯ ಹೋರಾಟದ ಶತಮಾನದ ಇತಿಹಾಸವು ದೇಶದ ೨೦೨೨-೨೩ನೇ ಸಾಲಿನಲ್ಲಿ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ೧ ರಿಂದ ೧೦ನೇ ತರಗತಿಯವರೆಗಿನ ೩೧,೮೭೪ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಹಾಗೂ ಬಿಸಿ ಹಾಲು ವಿತರಿಸಲಾಗುತ್ತಿದೆ. ಹಾಗೆಯೇ ಜುಲೈ ೧೯ ರಿಂದ ಜಿಲ್ಲೆಯ ೧ ರಿಂದ ೮ನೇ ತರಗತಿಯ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶಗಳನ್ನು ವಿತರಿಸಲಾಗುತ್ತಿದೆ.

ಜಿಲ್ಲೆಯ ಮಡಿಕೇರಿ ಮತ್ತು ಆಲೂರು ಸಿದ್ದಾಪುರ ಐಟಿಐ ಕಾಲೇಜುಗಳನ್ನು ಉನ್ನತೀಕರಿಸ ಲಾಗಿದೆ. ರಾಜ್ಯದಲ್ಲಿ ೧೫,೦೦೦ ಶಾಲಾ ಶಿಕ್ಷಕರ ನೇಮಕಾತಿಗೆ ಕ್ರಮವಹಿಸ ಲಾಗಿದೆ. ಅತಿಥಿ ಶಿಕ್ಷಕರು, ಉಪನ್ಯಾಸಕರು ಹಾಗೂ ಮಧ್ಯಾಹ್ನ ಬಿಸಿಯೂಟ ಕಾರ್ಯಕರ್ತರ ಗೌರವ ಸಂಭಾವನೆಯನ್ನು ಹೆಚ್ಚಿಸಲಾಗಿದೆ. ಆರೋಗ್ಯ ಕೇಂದ್ರಗಳನ್ನು ಉನ್ನತೀಕರಿಸುವ ಯೋಜನೆಯಡಿ ಜಿಲ್ಲೆಯ ಮೂರ್ನಾಡಿನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ, ಕುಶಾಲನಗರ ಮತ್ತು ಪೊನ್ನಂಪೇಟೆ ಆಸ್ಪತ್ರೆಗಳನ್ನು ತಾಲೂಕು ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ತಿಳಿಸಿದರು.

ಕೋವಿಡ್ ಲಸಿಕೆ

ಕೊಡಗು ಜಿಲ್ಲೆಯಲ್ಲಿ ೧೨ ವರ್ಷ ಮೇಲ್ಪಟ್ಟು ೪.೪ ಲಕ್ಷ ಮಂದಿ ಕೋವಿಡ್ ನಿಯಂತ್ರಣ ಲಸಿಕೆ ಪಡೆದಿದ್ದಾರೆ. ಪ್ರಥಮ ಮತ್ತು ದ್ವಿತೀಯ ಡೋಸ್‌ನ್ನು ಶೇ. ೧೦೦ ಕ್ಕಿಂತ ಹೆಚ್ಚು ಪಡೆದಿದ್ದು, ಈಗಾಗಲೇ ಬೂಸ್ಟರ್ ಡೋಸ್ ಅನ್ನು ಉಚಿತವಾಗಿ ನೀಡ¯ Áಗುತ್ತಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಕೊಡಗು ಜಿಲ್ಲೆಯಲ್ಲಿ ೩.೨೮ ಲಕ್ಷ ಮಂದಿಗೆ ಆರೋಗ್ಯ ಕಾರ್ಡ್ ವಿತರಿಸಲಾಗಿದ್ದು, ಕೊಡಗು ಜಿಲ್ಲೆಯು ಶೇ. ೭೭ ರಷ್ಟು ಪ್ರಗತಿ ಸಾಧಿಸಿ, ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದರು.

ಸೌಲಭ್ಯಗಳು

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ನಿಟ್ಟಿನಲ್ಲಿ ಸರ್ಕಾರ ೧೦೦ ಕೋಟಿ ರೂ. ಬಿಡುಗಡೆ ಮಾಡಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸಿಟಿ ಸ್ಕಾö್ಯನ್, ಐಸಿಯು ಬೆಡ್, ಆಕ್ಸಿಜನ್ ಹೀಗೆ ಎಲ್ಲಾ ರೀತಿಯ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಸ್ನಾತಕೋತ್ತರ

(ಮೊದಲ ಪುಟದಿಂದ) ವೈದ್ಯಕೀಯ ಪದವಿ, ಜೊತೆಗೆ ಬಿಎಸ್ಸಿ ನರ್ಸಿಂಗ್ ಪದವಿ ಆರಂಭಿಸಲಾಗಿದೆ. ‘ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ’ ಅಡಿಯಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಆಚರಣೆಯ ಭಾಗವಾಗಿ, ಭವಿಷ್ಯಕ್ಕಾಗಿ ನೀರನ್ನು ಸಂರಕ್ಷಿಸುವ ದೃಷ್ಟಿಯಿಂದ ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ ೧೫ ಜಲಮೂಲಗಳನ್ನು ಅಭಿವೃದ್ಧಿ ಪಡಿಸುವ ಕಾಮಗಾರಿಗಳು ಪೂರ್ಣಗೊಂಡಿರುತ್ತದೆ.

ಮನೆ ಮನೆಗೆ ಗಂಗೆ ಜಲಜೀವನ್ ಮಿಷನ್ ಯೋಜನೆಯಡಿ ಕೊಡಗು ಜಿಲ್ಲೆಯಲ್ಲಿ ಇದುವರೆಗೆ ೮೯,೧೫೭ ಕುಟುಂಬಗಳಿಗೆ ನಲ್ಲಿ ನೀರು ಸಂಪರ್ಕ ಕಲ್ಪಿಸಲಾಗಿದೆ. ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿಯಲ್ಲಿ ಕೊಡಗು ಜಿಲ್ಲೆಯ ಒಟ್ಟು ೨,೦೫೬ ಮಂದಿ ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರ ವಿತರಿಸಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು ೫೦,೨೦೧ ರೈತರು ನೋಂದಣಿಯಾಗಿದ್ದು, ಇದುವರೆಗೆ ೧೧ನೇ ಕಂತಿನಲ್ಲಿ ೪೪,೦೨೫ ಫಲಾನುಭವಿಗಳಿಗೆ ಒಟ್ಟು ೮.೮೧ ಕೋಟಿ ರೂ. ಪಾವತಿಸಲಾಗಿದೆ ಎಂದು ಹೇಳಿದರು.ಯೋಜನೆಗಳು

ರಾಜ್ಯ ಸರ್ಕಾರದಿಂದ ‘ಜಿಲ್ಲೆಗೊಂದು ಗೋಶಾಲೆ’ ತೆರೆಯುವ ಯೋಜನೆಯಡಿ ಕಟ್ಟಡ ನಿರ್ಮಾಣ ಮತ್ತು ಇತರೆ ನಿರ್ವಹಣೆಗಾಗಿ ಜಿಲ್ಲೆಗೆ ಒಂದು ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಈಗಾಗಲೇ ಕೆ. ನಿಡುಗಣೆ ಗ್ರಾಮದಲ್ಲಿ ಗೋಶಾಲೆಯ ಕಟ್ಟಡ ಕಾಮಗಾರಿಯು ಮುಕ್ತಾಯ ಹಂತದಲ್ಲಿದೆ. ‘ಪುಣ್ಯಕೋಟಿ ದತ್ತು’ ಯೋಜನೆಯಡಿಯಲ್ಲಿ ಗೋಶಾಲೆಯಲ್ಲಿರುವ ತಲಾ ಒಂದು ಜಾನುವಾರನ್ನು ಒಂದು ವರ್ಷದ ಅವಧಿಗೆ ೧೧ ಸಾವಿರ ರೂ.ಗೆ ದತ್ತು ಪಡೆಯುವ ಯೋಜನೆಗೆ ಮುಖ್ಯಮಂತ್ರಿ ಅವರು ಜುಲೈ ೨೮ ರಂದು ಚಾಲನೆ ನೀಡಿದ್ದಾರೆ.

ಕೊಡಗು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ನಗರ ಸ್ಥಳೀಯ ಸಂಸ್ಥೆಗಳಿಗೆ ೫೫ ಕೋಟಿ ರೂ. ಹಂಚಿಕೆಯಾಗಿರುತ್ತದೆ. ನಿವೇಶನ ರಹಿತ ಫಲಾನುಭವಿಗಳಿಗೆ ಗುಂಪು ಮನೆ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗಿದೆ. ಅಮೃತ ಕಿರು ಉದ್ದಿಮೆ ಯೋಜನೆಯಡಿ ಕೊಡಗು ಜಿಲ್ಲೆಯ ಒಟ್ಟು ೬೦ ಸ್ತಿçÃಶಕ್ತಿ ಗುಂಪುಗಳಿಗೆ ಅನುದಾನ ವಿತರಿಸಲಾಗಿದೆ.

ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ೨೦೨೨-೨೩ನೇ ಸಾಲಿನಲ್ಲಿ ಜುಲೈ ಅಂತ್ಯದವರೆಗೆ ಒಟ್ಟು ೮೪೩ ಫಲಾನುಭವಿಗಳಿಗೆ ಪ್ರೋತ್ಸಾಹಧನವನ್ನು ಮಂಜೂರಾತಿ ನೀಡಲಾಗಿದ್ದು, ಪ್ರಾರಂಭದಿAದ ಇದುವರೆಗೆ ಒಟ್ಟು ೧೩,೪೧೧ ಫಲಾನುಭವಿಗಳಿಗೆ ಮಂಜೂರಾತಿ ನೀಡಿದ್ದು, ೫.೬ ಕೋಟಿ ರೂ. ವೆಚ್ಚ ಭರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪರಿಹಾರ ವಿತರಣೆ

ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಕರ್ಣಂಗೇರಿ, ಜಂಬೂರು, ಮದೆನಾಡು, ಬಿಳಿಗೇರಿ ಮತ್ತು ಗಾಳಿಬೀಡು ಗ್ರಾಮಗಳಲ್ಲಿ ಸುಮಾರು ೬೬೦ ಮನೆಗಳನ್ನು ಎಲ್ಲಾ ಮೂಲ ಸೌಕರ್ಯಗಳೊಂದಿಗೆ ನಿರ್ಮಿಸಿ ಹಸ್ತಾಂತರಿಸಲಾಗಿದೆ. ಪ್ರಸ್ತುತ ಕೆ. ನಿಡುಗಣೆ ಗ್ರಾಮದ ಆರ್.ಟಿ.ಓ. ಕಚೇರಿ ಬಳಿ ೭೬ ಮನೆಗಳ ಕಾಮಗಾರಿ ಪೂರ್ಣಗೊಂಡಿದ್ದು, ಶೀಘ್ರದಲ್ಲಿ ಹಸ್ತಾಂತರಿಸಲಾಗುವುದು.

ಸರ್ಕಾರದ ಆದೇಶದಂತೆ ಪೂರ್ಣ ಮನೆ ಹಾನಿ ಪ್ರಕರಣಗಳಲ್ಲಿ ಎನ್‌ಡಿಆರ್‌ಎಫ್ ಮಾರ್ಗಸೂಚಿಯ ದರ ಪ್ರತಿ ಮನೆಗೆ ೯೫,೧೦೦ ರೂ. ಜೊತೆಗೆ ರಾಜ್ಯ ಸರ್ಕಾರದ ಹೆಚ್ಚುವರಿ ಪರಿಹಾರ ೪,೦೪,೯೦೦ ರೂ. ಸೇರಿ ಒಟ್ಟು ೫ ಲಕ್ಷ ರೂ.ಗಳನ್ನು ಶೇ. ೨೫ ರಿಂದ ೭೫ ರಷ್ಟು ತೀವ್ರ ಮನೆಹಾನಿ ಪ್ರಕರಣಗಳಲ್ಲಿ ಎನ್‌ಡಿಆರ್‌ಎಫ್ ಮಾರ್ಗಸೂಚಿ ದರ ೯೫,೧೦೦ ರೂ. ಅಲ್ಲದೇ ರಾಜ್ಯ ಸರ್ಕಾರದ ಹೆಚ್ಚುವರಿ ಪರಿಹಾರ ೨,೦೪,೯೦೦ ರೂ. ಸೇರಿ ಒಟ್ಟು ೩ ಲಕ್ಷ ರೂ.ಗಳನ್ನು ಮತ್ತು ಶೇ. ೧೫ ರಿಂದ ೨೫ ಭಾಗಶಃ ಮನೆ ಹಾನಿ ಪ್ರಕರಣಗಳಿಗೆ ಎನ್‌ಡಿಆರ್‌ಎಫ್ ಮಾರ್ಗಸೂಚಿಯ ದರ ೫,೨೦೦ ರೂ. ಅಲ್ಲದೇ ರಾಜ್ಯ ಸರ್ಕಾರದ ಹೆಚ್ಚುವರಿ ಪರಿಹಾರ ೪೪,೮೦೦ ರೂ. ಸೇರಿ ಒಟ್ಟು ೫೦,೦೦೦ ರೂ.ಗಳನ್ನು ಅರ್ಹ ಸಂತ್ರಸ್ತರಿಗೆ ನಗದು ವರ್ಗಾವಣೆ ಮಾಡಲು ಕ್ರಮಕೈಗೊಳ್ಳಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಅಧಿಕ ಮಳೆಯಾಗಿದ್ದು, ಶೇ. ೩೩ಕ್ಕಿಂತ ಅಧಿಕ ಹಾನಿಯಾದ ಬಹು ವಾರ್ಷಿಕ ಬೆಳೆಗಳಿಗೆ ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ರೂ. ೩೬,೦೦೦ಗಳನ್ನು ಬಹು ವಾರ್ಷಿಕ ಬೆಳೆಗಳಿಗೆ ಹಾಗೂ ರೂ.೧೩,೫೦೦ಗಳನ್ನು ವಾರ್ಷಿಕ ಬೆಳೆಗಳಿಗೆ ಪ್ರತಿ ರೈತರಿಗೆ ೨ ಹೆಕ್ಟೇರಿಗೆ ಮಿತಿಗೊಳಿಸಿ, ಪರಿಹಾರ ನೀಡಲು ಕ್ರಮವಹಿಸಲಾಗುತ್ತಿದೆ. ಜುಲೈ ತಿಂಗಳಿನಲ್ಲಿ ಸುರಿದ ಮಳೆಗೆ ಜಿಲ್ಲೆಯಲ್ಲಿ ಹಾನಿಗೊಳಗಾದ ೩೯೪ ಮನೆಗಳು, ೩೫ ಜಾನುವಾರುಗಳ ಪ್ರಾಣಹಾನಿಗೆ ಸಂಬAಧಿಸಿದAತೆ ಪರಿಹಾರ ವಿತರಿಸಲಾಗಿದೆ. ಮೃತರಾದ ಒಬ್ಬ ಮಹಿಳೆಯ ಕುಟುಂಬದ ಸದಸ್ಯರಿಗೆ ೫ ಲಕ್ಷ ರೂ. ಪರಿಹಾರ ನೀಡಲಾಗಿದೆ. ೨೦೨೧-೨೨ನೇ ಸಾಲಿನಲ್ಲಿ ಕಾಫಿ ಸೇರಿದಂತೆ ಇನ್ನಿತರ ಬೆಳೆ ಹಾನಿ ಪ್ರಕರಣಗಳಲ್ಲಿ ೪೪,೨೯೨ ರೈತರಿಗೆ ಒಟ್ಟು ೧೦೬ ಕೋಟಿ ರೂ. ಪರಿಹಾರವನ್ನು ನೀಡಲಾಗಿದೆ ಎಂದು ಸಚಿವರು ಮಾಹಿತಿ ಒದಗಿಸಿದರು.

ಸನ್ಮಾನ ಪುರಸ್ಕಾರ

ಇದೇ ಸಂದರ್ಭದಲ್ಲಿ ಅಂರ‍್ರಾಷ್ಟಿçÃಯ ಹಾಕಿ ಆಟಗಾರ್ತಿ, ತರಬೇತುದಾರರೂ ಆಗಿರುವ ಜಿಲ್ಲೆಯ ಹೊನ್ನಂಪಾಡಿ ಅಂಕಿತಾ ಸುರೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಹತ್ತನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಿ ಪುರಸ್ಕರಿಸಲಾಯಿತು.

ಪಥ ಸಂಚಲನ

ಕಾರ್ಯಕ್ರಮದಲ್ಲಿ ವಿವಿಧ ತಂಡಗಳ ಪಥ ಸಂಚಲನ ಗಮನ ಸೆಳೆದವು. ಡಿಎಆರ್ ಇನ್ಸ್ಪೆಕ್ಟರ್ ಚೆನ್ನನಾಯಕ್ ಮಾರ್ಗದರ್ಶನದಲ್ಲಿ ಪೊಲೀಸ್, ಅರಣ್ಯ, ಗೃಹರಕ್ಷಕದಳ, ಸೈನಿಕ ಶಾಲೆ, ಶಾಲಾ - ಕಾಲೇಜುಗಳ ಎನ್‌ಸಿಸಿ, ಸ್ಕೌಟ್ ಮತ್ತು ಗೈಡ್ಸ್, ಸೇವಾದಳದ ವಿದ್ಯಾರ್ಥಿಗಳು ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು. ಎಆರ್‌ಎಸ್‌ಐ ಸಿದ್ದೇಶ್ ನೇತೃತ್ವದ ಪೊಲೀಸ್ ಬ್ಯಾಂಡ್‌ನೊAದಿಗೆ ಪಥಸಂಚಲನ ನಡೆಯಿತು. ವಿದ್ಯಾರ್ಥಿಗಳಿಗೆ ಸಿಹಿ ಹಂಚಲಾಯಿತು; ಸಂತ ಮೈಕಲರ ಶಾಲಾ ವಿದ್ಯಾರ್ಥಿನಿಯರು ನಾಡಗೀತೆ, ರೈತ ಗೀತೆ ಹಾಡಿದರೆ, ಅರಮೇರಿ ಎಸ್‌ಎಂಎಸ್ ಶಾಲೆ ವಿದ್ಯಾರ್ಥಿಗಳು ವಂದೇ ಮಾತರಂ ಹಾಡಿದರು.

ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವೀರಾಜಪೇಟೆ ಕ್ಷೇತ್ರ ಶಾಸಕ ಕೆ.ಜಿ. ಬೋಪಯ್ಯ, ರಾಜ್ಯ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಡಿಕೇರಿ ನಗರಸಭಾಧ್ಯಕ್ಷೆ ಅನಿತಾ ಪೂವಯ್ಯ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ. ಕೇಶವಕಾಮತ್, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ನಂಜುAಡಪ್ಪ, ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನಿರಂಜನ್ ಮೂರ್ತಿ, ಉಪವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಜಿ.ಪಂ. ಕಾರ್ಯನಿರ್ವಹಣಾಧಿಕಾರಿ ಭಂವರ್‌ಸಿAಗ್ ಮೀನ, ಸಂಘ - ಸಂಸ್ಥೆಗಳ ಪ್ರತಿಯೊಬ್ಬರು, ಇಲಾಖಾ ಅಧಿಕಾರಿಗಳು ಭಾಗವಹಿಸಿದ್ದರು.