ಕುಶಾಲನಗರ, ಆ. ೧೪: ಕುಶಾಲನಗರ ಸಮೀಪದ ಅಳುವಾರ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ೭೫ನೇ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಬೈಕ್ ಜಾಥಕ್ಕೆ ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್ ಅವರು ಚಾಲನೆ ನೀಡಿದರು.

ಸಂಸ್ಥೆಯ ಪ್ರಭಾರ ನಿರ್ದೇಶಕರಾದ ಪ್ರೊ. ಕೆ. ಎಸ್. ಚಂದ್ರಶೇಖರಯ್ಯ, ವಿವಿಧ ವಿಭಾಗದ ಉಪನ್ಯಾಸಕರು, ಆಡಳಿತ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು ದ್ವಿಚಕ್ರ ವಾಹನಗಳಲ್ಲಿ ರಾಷ್ಟç ಧ್ವಜದೊಂದಿಗೆ ಬೈಕ್ ಜಾಥದಲ್ಲಿ ಭಾಗವಹಿಸಿದರು.