ಮಡಿಕೇರಿ, ಆ. ೧೫: ಸಹಕಾರ ಸಂಘಗಳು ಸಹಕಾರ ಸಂಘಗಳ ಕಾಯ್ದೆ, ಕಾನೂನಿನಡಿಯಲ್ಲಿ ನೋಂದಣಿಯಾಗಿ ಸಹಕಾರ ತತ್ವಗಳನ್ನು ಅಳವಡಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದು, ಪ್ರತಿಯೊಂದು ಕಾರ್ಯಚಟುವಟಿಕೆಗಳನ್ನು ಕಾನೂನಿನ ವ್ಯಾಪ್ತಿಯಡಿಯಲ್ಲಿ ಮಾಡುತ್ತವೆ. ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರ ಪದಾರ್ಪಣೆ ಮಾಡಿದ ಕೆಲವೇ ವರ್ಷಗಳಲ್ಲಿ ವೀರಾಜಪೇಟೆಯ ಮಹಿಳಾ ಸಹಕಾರ ಸಂಘವು ಸ್ಥಾಪಿಸಲ್ಪಟ್ಟು ಮಹಿಳೆಯರ ಅಭ್ಯುದ್ಯಯಕ್ಕಾಗಿ ಪ್ರಸ್ತುತವೂ ಕೆಲಸ ನಿರ್ವಹಿಸುತ್ತಿದೆ. ಸಹಕಾರ ಸಂಘಗಳ ಮೂಲಕ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಸಾಧ್ಯ ಎಂದು ಸಹಕಾರ ಭಾರತಿಯ ರಾಜ್ಯ ಮಹಿಳಾ ಸಂಘಟನಾ ಕಾರ್ಯದರ್ಶಿ ಬೀನಾ ಬೊಳ್ಳಮ್ಮ ಅಭಿಪ್ರಾಯಿಸಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿ., ಮಡಿಕೇರಿ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಮಹಿಳಾ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಮತ್ತು ಕಾರ್ಯದರ್ಶಿಗಳಿಗೆ ಸಹಕಾರ ಕಾಯ್ದೆ-ಕಾನೂನು, ಸರ್ಕಾರದಿಂದ ದೊರಕುವ ಸವಲತ್ತುಗಳು ಹಾಗೂ ಮಹಿಳಾ ಆರೋಗ್ಯದ ಕುರಿತು ಕುಶಾಲನಗರದ ಎ.ಪಿ.ಸಿ.ಎಂ.ಎಸ್. ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶೇಷÀ ಶಿಕ್ಷಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಹಕಾರ ಸಂಘಗಳು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು. ಸಂಘದ ಸದಸ್ಯರುಗಳು ಪರಸ್ಪರ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಸಣ್ಣ-ಸಣ್ಣ ಉದ್ಯಮಗಳನ್ನು ಸಂಘಗಳ ಮೂಲಕ ನಡೆಸಿಕೊಂಡು ಬರಬೇಕು ಹಾಗೂ ಸ್ಥಳೀಯ ಉತ್ಪನ್ನಗಳನ್ನು ಸಂಘಗಳ ಮೂಲಕ ಉತ್ಪಾದಿಸಿ, ಮಾರುಕಟ್ಟೆ ಸೌಲಭ್ಯ ಒದಗಿಸಿದ್ದಲ್ಲಿ ಸ್ಥಳೀಯರಿಗೆ ಉದ್ಯೋಗವು ದೊರೆಯುವುದು. ಇಂದು ದೇಶದಲ್ಲಿ ಉನ್ನತ ಹುದ್ದೆಗಳಲ್ಲಿ ಮಹಿಳೆಯರು ಕಾರ್ಯನಿರ್ವಹಿಸುತ್ತಿರುವುದಾಗಿ ಅವರು ತಿಳಿಸಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಶ್ರೇಷ್ಠ ಮಹಿಳಾ ಸಹಕಾರಿ ಪ್ರಶಸ್ತಿ ಪುರಸ್ಕೃತೆÀ ಲೀಲಾ ಮೇದಪ್ಪ ಅವರು, ಮಹಿಳಾ ಸಹಕಾರ ಸಂಘಗಳ ಮೂಲಕ ಆದಾಯೋತ್ಪನ್ನ ಚಟುವಟಿಕೆ ಕೈಗೊಂಡಲ್ಲಿ ಮಹಿಳೆಯರ ಆರ್ಥಿಕ ಪ್ರಗತಿ ಸಾಧ್ಯ. ಇಂತಹ ಶಿಕ್ಷಣ ಕಾರ್ಯಕ್ರಮಗಳ ಮೂಲಕ ವಿಷಯಗಳ ಮಾಹಿತಿ ಅರಿತು ಪ್ರತಿಯೊಬ್ಬರು ಅಳವಡಿಸಿಕೊಂಡಲ್ಲಿ ಕಾರ್ಯಕ್ರಮವು ಯಶಸ್ವಿಯಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರು ಹಾಗೂ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕ ಎ.ಕೆ. ಮನು ಮುತ್ತಪ್ಪ ಅವರು ಮಾತನಾಡಿ, ಭಾರತವು ವೈವಿಧ್ಯತೆಯಿಂದ ಕೂಡಿದ ಹಾಗೂ ವಿವಿಧ ಸಂಸ್ಕೃತಿಗಳನ್ನು ಅನುಸರಿಸುತ್ತಿರುವ ದೇಶ. ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಮಹಿಳೆಯರ ಪಾತ್ರ ಮಹತ್ತರವಾದದ್ದು. ಸಂಸ್ಕೃತಿ, ಆಚಾರ-ವಿಚಾರಗಳು ಮನೆಯಲ್ಲಿ ಪ್ರಾರಂಭಗೊಳ್ಳುವುದರಿAದ ಮನೆಯಲ್ಲಿ ತಾಯಿಯು ತನ್ನ ಮಗುವಿಗೆ ಬೋಧಿಸುವ ಆಚಾರ-ವಿಚಾರ, ಸಂಸ್ಕೃತಿಯು ಮಗುವಿನಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಸಹಕಾರಿಯಾಗುತ್ತದೆ. ಮಹಿಳೆಯರನ್ನು ಇನ್ನೂ ಸುಶಿಕ್ಷಿತರನ್ನಾಗಿಸಲು ಇಂತಹ ಶಿಕ್ಷಣ ಕಾರ್ಯಕ್ರಮಗಳ ಮೂಲಕ ಸಾಧ್ಯ. ಮಹಿಳೆಯರ ಸ್ವಾವಲಂಬನೆಗೆ ಸಹಕಾರ ಸಂಘಗಳ ಮೂಲಕ ಸಾಲ ಸೌಲಭ್ಯಗಳನ್ನು ಕಡಿಮೆ ಬಡ್ಡಿ ದರದಲ್ಲಿ ವಿತರಿಸುತ್ತಿದೆ. ಸರ್ಕಾರವು ಈ ದಿಸೆಯಲ್ಲಿ ಹಲವು ಯೋಜನೆಗಳನ್ನು ಘೋಷಿಸಿದೆ. ಮಹಿಳೆಯರು ಹೈನುಗಾರಿಕೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಂಡಿದ್ದು ಆ ಮೂಲಕ ಆರ್ಥಿಕವಾಗಿ ಪ್ರಗತಿಯನ್ನು ಸಾಧಿಸುತ್ತಿದ್ದಾರೆ. ಅಂತೆಯೇ ಸಹಕಾರ ಮಹಾಮಂಡಳ ಹಾಗೂ ಯೂನಿಯನ್ ವತಿಯಿಂದ ಪ್ರತಿ ವರ್ಷ ಮಹಿಳೆಯರನ್ನು ಆರ್ಥಿಕವಾಗಿ ಸದೃಢಗೊಳಿಸಲು ಇಂತಹ ಶಿಕ್ಷಣ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು ಪ್ರತಿಯೊಬ್ಬರೂ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತಾಗಬೇಕೆAದು ಕರೆ ನೀಡಿದರು.
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಶ್ರೀಮತಿ ಎಸ್.ಆರ್. ಕೇಶಿನಿ, ಕೆ.ಐ.ಸಿ.ಎಂ.ನ ನಿವೃತ್ತ ಪ್ರಾಂಶುಪಾಲೆ ಎಂ.ಎA. ಶ್ಯಾಮಲಾ, ಸೋಮವಾರಪೇಟೆ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ. ಶಾಂತಿ ಅವರು ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಎನ್.ಎ. ರವಿ ಬಸಪ್ಪ, ಎನ್.ಎಂ. ಉಮೇಶ್ ಉತ್ತಪ್ಪ, ಪಿ.ಬಿ. ಯತೀಶ್ ಅವರುಗಳು ಉಪಸ್ಥಿತರಿದ್ದರು.