ಸಿದ್ದಾಪುರ, ಆ. ೧೬: ಮಾಲ್ದಾರೆ ವಲಯ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಗ್ರಾ.ಪಂ. ಸದಸ್ಯರುಗಳ ಸಭೆ ತಾ. ೧೮ ರಂದು ಮಾಲ್ದಾರೆಯಲ್ಲಿ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಚಂಬAಡ ವಿಜು ಬಿದ್ದಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಅಪರಾಹ್ನ ೨.೩೦ಕ್ಕೆ ಮಾಲ್ದಾರೆ ವಿ.ಎಸ್.ಎಸ್.ಎನ್. ಸಭಾಂಗಣದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದ್ದು, ಈ ಭಾಗದ ಪಕ್ಷದ ಕಾರ್ಯಕರ್ತರನ್ನು ಪಕ್ಷವು ಕಡೆಗಣಿಸಿದ್ದು, ಕಳೆದ ಹಲವಾರು ತಿಂಗಳುಗಳಿAದ ಪಕ್ಷದ ಯಾವುದೇ ಚಟುವಟಿಕೆಗಳಿಗೆ ಹಾಗೂ ಸಮಸ್ಯೆಗಳಿಗೆ ಜಿಲ್ಲಾಮಟ್ಟದ ಹಾಗೂ ಬ್ಲಾಕ್ ಮಟ್ಟದ ನಾಯಕರುಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಪಕ್ಷದ ಕಾರ್ಯಕರ್ತರು ಮುಂದಿನ ನಿರ್ಧಾರವನ್ನು ಕೈಗೊಳ್ಳುವ ನಿಟ್ಟಿನಲ್ಲಿ ಅಂದಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದೆಂದು ವಿಜು ಬಿದ್ದಪ್ಪ ತಿಳಿಸಿದ್ದಾರೆ.