ಪೊನ್ನಂಪೇಟೆ, ಆ. ೧೬: ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮುಗುಟಗೇರಿ ಗ್ರಾಮದ ಕಾಲೋನಿ ನಿವಾಸಿ ಮುತ್ತಣ್ಣ ಎಂಬವರ ಪುತ್ರ ನಿತಿನ್ (೨೪) ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತನ ತಂದೆ ತಾಯಿ ಕೆಲಸಕ್ಕೆ ತೆರಳಿದ ವೇಳೆ ಯುವಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪೋಷಕರು ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.