ಕೂಡಿಗೆ, ಆ. ೧೬: ಇಲ್ಲಿಗೆ ಸಮೀಪದ ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಸಭೆ ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಶಿರಂಗಾಲ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾ. ೧೭ ರಂದು (ಇಂದು) ನಡೆಯಲಿದೆ.

ಗ್ರಾಮ ಪಂಚಾಯಿತಿಯಲ್ಲಿ ೯ ಮಂದಿ ಸದಸ್ಯರುಗಳಿದ್ದು, ಇವರುಗಳಲ್ಲಿ ೬ ಮಂದಿ ಸದಸ್ಯರು ಕಳೆದ ಎರಡು ತಿಂಗಳ ಹಿಂದೆ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಜಿಲ್ಲೆಯ ಉಪ ವಿಭಾಗಾಧಿಕಾರಿಗೆ ಪತ್ರದ ಮೂಲಕ ಕೋರಿದ್ದರು. ಆದರೆ ಇದಕ್ಕೆ ತಡೆಯಾಜ್ಞೆ ತಂದ ಹಿನ್ನೆಲೆ ಸಭೆಯನ್ನು ಮುಂದೂಡಲಾಗಿತ್ತು.