ಕುಶಾಲನಗರ, ಆ. ೧೬: ನದಿಯ ಪಾವಿತ್ರö್ಯತೆಯನ್ನು ಅರಿತು ಸಂರಕ್ಷಣೆ ಮಾಡುವಲ್ಲಿ ಪ್ರತಿಯೊಬ್ಬರು ಕಾಳಜಿ ತೋರಬೇಕಾಗಿದೆ ಎಂದು ಶ್ರೀ ಮಾರಿಯಮ್ಮ ದೇವಾಲಯ ಸೇವಾ ಸಮಿತಿ ಅಧ್ಯಕ್ಷ ರಾಮದಾಸ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅವರು, ಕುಶಾಲನಗರ ಕಾವೇರಿ ಮಹಾ ಆರತಿ ಬಳಗ ಆಶ್ರಯದಲ್ಲಿ ಮಾರಿಯಮ್ಮ ದೇವಾಲಯ ಸೇವಾ ಸಮಿತಿ ಸಹಯೋಗದೊಂದಿಗೆ ನಡೆದ ೧೩೪ನೇ ಕಾವೇರಿ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಹುಣ್ಣಿಮೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅರ್ಚಕ ಕೃಷ್ಣಮೂರ್ತಿ ಭಟ್ ಕುಂಕುಮಾಚÀðನೆ, ಅಷ್ಟೋತ್ತರ ನಂತರ ನದಿಗೆ ಸಾಮೂಹಿಕವಾಗಿ ಆರತಿ ಬೆಳಗಲಾಯಿತು. ಈ ಸಂದರ್ಭ ಮಾರಿಯಮ್ಮ ದೇವಾಲಯ ಸಮಿತಿಯ ಹೆಚ್.ಎನ್. ರಾಮಚಂದ್ರ, ಗಣಪತಿ ದೇವಾಲಯ ಸಮಿತಿ ಅಧ್ಯಕ್ಷ ವಿ.ಎನ್. ವಸಂತಕುಮಾರ್, ಚೌಡೇಶ್ವರಿ ದೇವಾಲಯ ಸಮಿತಿ ಅಧ್ಯಕ್ಷ ಡಿ.ಟಿ. ವಿಜಯೇಂದ್ರ, ಎಂ. ಮಂಜುನಾಥ, ಕಾವೇರಿ ಆರತಿ ಬಳಗದ ವನಿತಾ ಚಂದ್ರಮೋಹನ್, ಡಿ.ಆರ್. ಸೋಮಶೇಖರ್, ಕೆ.ಆರ್. ಶಿವಾನಂದ, ಚಂದ್ರಮೋಹನ್ ಮತ್ತು ಬಳಗದ ಸದಸ್ಯರು ಇದ್ದರು.