ಮಡಿಕೇರಿ, ಆ. ೧೬: ನಗರದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉದ್ಯಮಿ ಹಾಗೂ ದಾನಿಗಳಾದ ಹರಪಳ್ಳಿ ರವೀಂದ್ರ ಅವರು ನೋಟ್ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.

ಶಾಲೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ ಮಾತನಾಡಿದ ರವೀಂದ್ರ ಅವರು, ಆಧುನಿಕ ಯುಗದಲ್ಲಿ ತಂತ್ರಜ್ಞಾನ ಏರುಗತಿಯಲ್ಲಿ ಮುಂದುವರೆಯುತ್ತಿದ್ದು, ಅದಕ್ಕೆ ಪೂರಕವಾಗಿ ವಿದ್ಯಾರ್ಥಿಗಳೂ ತಯಾರಾಗಬೇಕು. ಕನ್ನಡ ಭಾಷೆಯೊಂದಿಗೆ ಇಂಗ್ಲೀಷ್ ಭಾಷಾ ಜ್ಞಾನವನ್ನೂ ವೃದ್ಧಿಸಿಕೊಳ್ಳಬೇಕು ಎಂದರು. ಇಂದು ಆಡಳಿತದಲ್ಲಿ ಪ್ರಮುಖ ಹುದ್ದೆಯಲ್ಲಿರುವ ಬಹುತೇಕರು ಸರ್ಕಾರಿ ಶಾಲಾ ವಿದ್ಯಾರ್ಥಿ ಗಳಾಗಿದ್ದವರು ಎಂಬುದನ್ನು ಮನಗಾಣಬೇಕೆಂದು ಹೇಳಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯಶಿಕ್ಷಕಿ ನಳಿನಿ, ಶಾಲಾಭಿವೃದ್ಧಿ ಸಮಿತಿ ಸದಸ್ಯೆ ರಶೀದಾ ಬಾನು, ಬಿ.ಆರ್.ಪಿ. ಮಂಜುಳಾ, ಸಹ ಶಿಕ್ಷಕಿ ಸೌಮ್ಯಲತ ಅವರುಗಳು ಉಪಸ್ಥಿತರಿದ್ದರು.