ಕೂಡಿಗೆ, ಆ. ೧೭: ಜಿಲ್ಲೆಯ ಸಂಗೊಳ್ಳಿ ರಾಯಣ್ಣ ಕುರುಬರ ಹಿತರಕ್ಷಣಾ ಸಮಿತಿಯ ವತಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನವರ ಜಯಂತಿಯನ್ನು ಕೂಡಿಗೆಯ ಶಕ್ತಿ ಕೇಂದ್ರದ ಆವರಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಪ್ರಭಾಕರ್ ವಹಿಸಿ ಸಮುದಾಯಕ್ಕೆ ಸರಕಾರದಿಂದ ಸಿಗುವ ಯೋಜನೆಗಳ ಬಗ್ಗೆ ಮತ್ತು ಅದರ ಸದುಪಯೋಗ ಪಡಿಸಿಕೊಳ್ಳುವ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ತಿಳಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಮಾಜಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಗಣೇಶ್, ಸಂಗೊಳ್ಳಿ ರಾಯಣ್ಣನವರ ಜೀವನ ಚರಿತ್ರೆ ಮತ್ತು ಸಾಧನೆಗಳ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಉದಯಕುಮಾರ್, ಕಾರ್ಯದರ್ಶಿ ಮಂಜುನಾಥ, ಸಂಘಟನಾ ಕಾರ್ಯದರ್ಶಿ ಬರಮಣ್ಣ ಬೆಟ್ಟಗೇರಿ, ತಾಲೂಕು ಅಧ್ಯಕ್ಷ ಪುನೀತ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ಗಿರೀಶ್, ಕುಮಾರ್, ಸಮಿತಿಯ ನಿರ್ದೇಶಕರಾದ ಮಲ್ಲೇಶ್, ಮಾದೇವ್, ಸುರೇಶ್, ನಾಗರಾಜ್, ಸಂತೋಷ್, ಧರ್ಮ್, ರಮೇಶ್, ಸುಬ್ರಮಣಿ, ಶ್ರೀನಿವಾಸ್ ವಿಜಯಕುಮಾರ್, ಕೆ.ಆರ್.ರವಿ ಸೇರಿದಂತೆ ಸದಸ್ಯರು ಹಾಜರಿದ್ದರು.
ಇದೇ ಸಂದರ್ಭ ಕೂಡಿಗೆಯ ಶಕ್ತಿ ವೃದ್ಧಾಶ್ರಮಕ್ಕೆ ಆಹಾರ ಪದಾರ್ಥಗಳು ವಿತರಣೆ ಮಾಡಲಾಯಿತು. ಸಭೆಯಲ್ಲಿ ಮುಂದಿನ ಯೋಜನೆಗಳ ಬಗ್ಗೆ ಚರ್ಚೆಗಳು ಮತ್ತು ಸಮುದಾಯ ಭವನ ನಿರ್ಮಾಣ ಮಾಡುವ ಬಗ್ಗೆ ಚರ್ಚೆಗಳು ನಡೆದವು.