ಮಡಿಕೇರಿ, ಆ. ೧೭: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಾ. ೨೦ರಂದು ಬೆಳಿಗ್ಗೆ ೧೦ ಗಂಟೆಗೆ ಮಡಿಕೇರಿಯ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಭಾಂಗಣದಲ್ಲಿ ಸರ್ ಸಿ.ವಿ. ರಾಮನ್ ಜಿಲ್ಲಾಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿದೆ.

ಈಗಾಗಲೇ ಆನ್‌ಲೈನ್ ಮೂಲಕ ನೋಂದಣಿ ಮಾಡಿಸಿರುವ ಸ್ಪರ್ಧಿಗಳು ತಮ್ಮ ಶಾಲಾ ಶಿಕ್ಷಕರೊಂದಿಗೆ ಬೆಳಿಗ್ಗೆ ೯.೪೫ಕ್ಕೆ ಸ್ಥಳದಲ್ಲಿ ಹಾಜರಿದ್ದು ಹೆಸರು ನೋಂದಾಯಿಸಿಕೊAಡು ನಡೆಯಲಿರುವ ಲಿಖಿತ ಪರೀಕ್ಷೆಯಲ್ಲಿ ಭಾಗವಹಿಸಬೇಕು ಎಂದು ರಸಪ್ರಶ್ನೆ ಸ್ಪರ್ಧೆಯ ಜಿಲ್ಲಾ ಸಂಚಾಲಕ ಸಿ.ಎಸ್. ಸುರೇಶ್ ತಿಳಿಸಿದ್ದಾರೆ.

ಲಿಖಿತ ಪರೀಕ್ಷೆಯಲ್ಲಿ ಮೊದಲ ಮೂರು ಸ್ಥಾನ ಪಡೆದವರಿಗೆ ಮಾತ್ರ ನಂತರ ಮೌಖಿಕ ಪರೀಕ್ಷೆ ನಡೆಸಲಾಗುವುದು. ಮೌಖಿಕ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆಯುವ ತಂಡವು ನಂತರ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿದೆ ಎಂದು ತಿಳಿಸಲಾಗಿದೆ.

ಲಿಖಿತ ಪರೀಕ್ಷೆಯು ಪ್ರೌಢಶಾಲಾ ವಿಜ್ಞಾನ ಮತ್ತು ಗಣಿತ ವಿಷಯಕ್ಕೆ ಪೂರಕವಾಗಿರುತ್ತದೆ.

ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತಗೊಂಡ ಮೊದಲ ಎರಡು ಸ್ಥಾನಗಳಿಗೆ ಕ್ರಮವಾಗಿ ರೂ.೩ ಸಾವಿರ ಹಾಗೂ ರೂ.೨ ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಕಾರ್ಯದರ್ಶಿ ಡಿ.ಕೃಷ್ಣಚೈತನ್ಯ ತಿಳಿಸಿದ್ದಾರೆ.

ರಸಪ್ರಶ್ನೆ ಸ್ಪರ್ಧೆಗೆ ಸಂಬAಧಿಸಿದAತೆ ಹೆಚ್ಚಿನ ಮಾಹಿತಿಗಾಗಿ ಸ್ಪರ್ಧೆಯ ಸಂಯೋಜಕ ಸಿ.ಎಸ್.ಸುರೇಶ್ (ಮೊ: ೯೯೦೦೩೭೦೮೪೨) ಅಥವಾ ವಿಜ್ಞಾನ ಪರಿಷತ್ತು ಜಿಲ್ಲಾ ಕಾರ್ಯದರ್ಶಿ ಡಿ.ಕೃಷ್ಣಚೈತನ್ಯ (ಮೊ: ೯೪೪೯೨೦೨೦೫೫) ಅವರನ್ನು ಸಂಪರ್ಕಿಸಬಹುದು ಎಂದು ಸ್ಪರ್ಧಾ ಕಾರ್ಯಕ್ರಮದ ಸಂಘಟಕ ಟಿ.ಜಿ.ಪ್ರೇಮಕುಮಾರ್ ತಿಳಿಸಿದ್ದಾರೆ.