ವೀರಾಜಪೇಟೆ, ಆ.೧೭: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯಲ್ಲಿ ಹೆಸರಿರುವ ಮತದಾರರನ್ನು ದೃಢೀಕರಿಸಲು ಸ್ವಯಂ ಪ್ರೇರಿತವಾಗಿ ಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಗೆ ಲಿಂಕ್ ಮಾಡುವ ಕಾರ್ಯವನ್ನು ಗ್ರಾಮ ಗ್ರಾಮಗಳಲ್ಲಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ವೀರಾಜಪೇಟೆ, ಆ.೧೭: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯಲ್ಲಿ ಹೆಸರಿರುವ ಮತದಾರರನ್ನು ದೃಢೀಕರಿಸಲು ಸ್ವಯಂ ಪ್ರೇರಿತವಾಗಿ ಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಗೆ ಲಿಂಕ್ ಮಾಡುವ ಕಾರ್ಯವನ್ನು ಗ್ರಾಮ ಗ್ರಾಮಗಳಲ್ಲಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ದೇಶದ ಪ್ರತಿಯೊಬ್ಬ ಮತದಾರರು ಚುನಾವಣಾ ಗುರುತಿನ ಚೀಟಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಬೇಕಿದೆ. ಈಗಾಗಲೇ ಗ್ರಾಮಗಳಲ್ಲಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಈ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ಯಾವ ಮತದಾರರ ನೋಂದಣಿ ಕಾರ್ಯ ನಡೆದಿಲ್ಲವೋ ಅಂತವರು ಪಡಿತರ ತೆಗದುಕೊಳ್ಳುವಾಗ ತಮ್ಮ ನ್ಯಾಯಬೆಲೆ ಅಂಗಡಿಗಳ ಮುಖ್ಯಸ್ಥರಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡಿನ ನಕಲಿ ಪ್ರತಿ ಹಾಗೂ ದೂರವಾಣಿ ಸಂಖ್ಯೆಯನ್ನು ನೀಡಿದರೆ ಅವರು ಬೂತ್ಮಟ್ಟದ ಅಧಿಕಾರಿಗಳಿಗೆ ಅದನ್ನು ನೀಡುತ್ತಾರೆ. ಅಧಿಕಾರಿಗಳು ನೋಂದಣಿ ಕಾರ್ಯ ಮಾಡುವಾಗ ಸಂಬAಧಿಸಿದವರ ದೂರವಾಣಿ ಸಂಖ್ಯೆಗೆ ಓಟಿಪಿ ಬರುತ್ತದೆ. ಆ ಓಟಿಪಿ ಸಂಖ್ಯೆಯನ್ನು ಅಧಿಕಾರಿಗಳಿಗೆ ನೀಡಬೇಕು.
ಸ್ಮಾರ್ಟ್ ಫೋನ್ ಇರುವವರು ಗೂಗಲ್ ಪ್ಲೇಸ್ಟೋರ್ಗೆ ಮೂಲಕ ವೋಟರ್ ಹೆಲ್ಪ್ಲೈನ್ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಆಧಾರ್ ಕಾರ್ಡ್ ಇಲ್ಲದವರು ಮತದಾನಕ್ಕೆ ಕೇಂದ್ರ ಸರ್ಕಾರ ನೀಡಿರುವ ೧೧ ದಾಖಲಾತಿಗಳ ಪೈಕಿ ಯಾವುದಾದರು ಒಂದನ್ನು ನೀಡಬಹದಾಗಿದೆ. ಈ ಪ್ರಕ್ರಿಯೆಗೆ ಮೂರು ತಿಂಗಳ ಕಾಲಾವಕಾಶ ಇದೆ ಎಂದು ಹೇಳಿದರು. ವೇದಿಕೆಯಲ್ಲಿ ಪ್ರಭಾರ ಸಹಾಯಕ ನಿರ್ದೇಶಕ ಪ್ರವೀಣ್, ಆಹಾರ ಇಲಾಖೆ ಶಿರಸ್ತೆದಾರ್ ಸತೀಶ್ ಉಪಸ್ಥಿತರಿದ್ದರು.