ಮಡಿಕೇರಿ, ಆ. ೧೭: ನೆಲ್ಲಿಹುದಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ೨೦೨೨-೨೩ ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.

ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಎಸ್. ಜಾನ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪಿ.ಸಿ. ಅಚ್ಚಯ್ಯ ವಿದ್ಯಾರ್ಥಿಗಳು ಕಾಲೇಜಿನಲ್ಲಿರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಪ್ರಾಂಶುಪಾಲ ಆಂಟೋನಿ ವಿವಿಯನ್ ಆಲ್ವರಿಸ್ ಮಾತನಾಡಿ, ಕಾಲೇಜಿನ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದರು. ರಾಜ್ಯಶಾಸ್ತç ಉಪನ್ಯಾಸಕರು ಹಾಗೂ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಆದ ಭಾಗ್ಯಜ್ಯೋತಿ ಕೆ.ಎ. ಅವರು ವಿದ್ಯಾರ್ಥಿ ನಾಯಕರಿಗೆ ಪ್ರಮಾಣ ವಚನ ಭೋದಿಸಿದರು. ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ನೀಡಲಾದ ನೋಟ್ ಪುಸ್ತಕಗಳನ್ನು ಈ ಸಂದರ್ಭ ವಿತರಿಸಲಾಯಿತು.

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಉಪನ್ಯಾಸಕರಾದ ಜಸ್ತಿನ್ ಕೊರೆಯ, ಧನಂಜಯ್ ನಿರೂಪಿಸಿ, ಲೋಕೇಶ್ ಪಿ.ವಿ., ದಮಯಂತಿ, ಮಣಿಕಂಠ ವಿ, ರೂಪಶ್ರೀ, ಇಸ್ಮಾಯಿಲ್ ಹಾಗೂ ತುಳಸಿ ಉಪಸ್ಥಿತರಿದ್ದರು. ಉಪನ್ಯಾಸಕ ಧನಂಜಯ್ ನಿರೂಪಿಸಿ, ಕೃಷ್ಣ ವಂದಿಸಿದರು.