ಸೋಮವಾರಪೇಟೆ, ಆ. ೧೭: ಸೋಮವಾರಪೇಟೆ ಪಟ್ಟಣದಲ್ಲಿ ಆಯೋಜನೆಗೊಂಡಿದ್ದ ತಿರಂಗಾ ಯಾತ್ರೆಯಲ್ಲಿ ದೇಶಾಭಿಮಾನದ ಘೋಷಣೆಗಳು ಮೊಳಗಿದವು. ಭಾರತ್ ಮಾತಾ ಕೀ ಜೈ ಘೋಷಣೆಯೊಂದಿಗೆ ಇಲ್ಲಿನ ವಿವೇಕಾನಂದ ವೃತ್ತದಿಂದ ಹೊರಟ ತಿರಂಗಾ ಯಾತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಚಾಲನೆ ನೀಡಿದರು.

ರಾಷ್ಟç ಧ್ವಜವನ್ನು ಹಿಡಿದು ಕೊಂಡಿದ್ದ ಸಾವಿರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಮೆರವಣಿಗೆಯಲ್ಲಿ ತೆರಳಿದರು. ವಿವೇಕಾನಂದ ವೃತ್ತದಿಂದ ಮಡಿಕೇರಿ ರಸ್ತೆ, ಸಿ.ಕೆ. ಸುಬ್ಬಯ್ಯ ರಸ್ತೆ, ಖಾಸಗಿ ಬಸ್ ನಿಲ್ದಾಣ, ತ್ಯಾಗರಾಜ ರಸ್ತೆ, ಮುಖ್ಯರಸ್ತೆ ಮಾರ್ಗವಾಗಿ ಸಾಗಿದ ಯಾತ್ರೆ, ಜೇಸೀ ವೇದಿಕೆಯಲ್ಲಿ ಸಮಾಪನಗೊಂಡಿತು.

ಪ್ರಧಾನಿ ಮೋದಿ ಅವರ ಕರೆಗೆ ಓಗೊಟ್ಟಿದ್ದ ದೇಶಾಭಿಮಾನಿಗಳು ತಿರಂಗಾ ಯಾತ್ರೆಯಲ್ಲಿ ಭಾಗವಹಿಸಿದ್ದರು. ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ಸಾಹದೊಂದಿಗೆ ರಾಷ್ಟçಧ್ವಜವನ್ನು ಹಿಡಿದು ಭಾರತ ಮಾತೆಗೆ ಜಯಕಾರ ಹಾಕುತ್ತಾ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

ಭಾರತೀಯ ಜನತಾ ಪಾರ್ಟಿಯ ಮುಖಂಡರು ಹಾಗೂ ಕಾರ್ಯಕರ್ತರು ತಿರಂಗ ಯಾತ್ರೆಯ ನೇತೃತ್ವ ವಹಿಸಿದ್ದರು. ಮಹಿಳಾ ಸೋಮವಾರಪೇಟೆ, ಆ. ೧೭: ಸೋಮವಾರಪೇಟೆ ಪಟ್ಟಣದಲ್ಲಿ ಆಯೋಜನೆಗೊಂಡಿದ್ದ ತಿರಂಗಾ ಯಾತ್ರೆಯಲ್ಲಿ ದೇಶಾಭಿಮಾನದ ಘೋಷಣೆಗಳು ಮೊಳಗಿದವು. ಭಾರತ್ ಮಾತಾ ಕೀ ಜೈ ಘೋಷಣೆಯೊಂದಿಗೆ ಇಲ್ಲಿನ ವಿವೇಕಾನಂದ ವೃತ್ತದಿಂದ ಹೊರಟ ತಿರಂಗಾ ಯಾತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಚಾಲನೆ ನೀಡಿದರು.

ರಾಷ್ಟç ಧ್ವಜವನ್ನು ಹಿಡಿದು ಕೊಂಡಿದ್ದ ಸಾವಿರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಮೆರವಣಿಗೆಯಲ್ಲಿ ತೆರಳಿದರು. ವಿವೇಕಾನಂದ ವೃತ್ತದಿಂದ ಮಡಿಕೇರಿ ರಸ್ತೆ, ಸಿ.ಕೆ. ಸುಬ್ಬಯ್ಯ ರಸ್ತೆ, ಖಾಸಗಿ ಬಸ್ ನಿಲ್ದಾಣ, ತ್ಯಾಗರಾಜ ರಸ್ತೆ, ಮುಖ್ಯರಸ್ತೆ ಮಾರ್ಗವಾಗಿ ಸಾಗಿದ ಯಾತ್ರೆ, ಜೇಸೀ ವೇದಿಕೆಯಲ್ಲಿ ಸಮಾಪನಗೊಂಡಿತು.

ಪ್ರಧಾನಿ ಮೋದಿ ಅವರ ಕರೆಗೆ ಓಗೊಟ್ಟಿದ್ದ ದೇಶಾಭಿಮಾನಿಗಳು ತಿರಂಗಾ ಯಾತ್ರೆಯಲ್ಲಿ ಭಾಗವಹಿಸಿದ್ದರು. ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ಸಾಹದೊಂದಿಗೆ ರಾಷ್ಟçಧ್ವಜವನ್ನು ಹಿಡಿದು ಭಾರತ ಮಾತೆಗೆ ಜಯಕಾರ ಹಾಕುತ್ತಾ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

ಭಾರತೀಯ ಜನತಾ ಪಾರ್ಟಿಯ ಮುಖಂಡರು ಹಾಗೂ ಕಾರ್ಯಕರ್ತರು ತಿರಂಗ ಯಾತ್ರೆಯ ನೇತೃತ್ವ ವಹಿಸಿದ್ದರು. ಮಹಿಳಾ ನೀಡಿದರು.

ಇಂದಿನ ಪ್ರಧಾನಿ ನರೇಂದ್ರ ಮೋದಿ ಅವರು ದೇಶವಾಸಿಗಳಲ್ಲಿ ರಾಷ್ಟಾçಭಿಮಾನವನ್ನು ಜಾಗೃತ ಗೊಳಿಸುವ ಉದ್ದೇಶದಿಂದ ಹರ್ ಘರ್ ತಿರಂಗಾ ಘೋಷಣೆ ಮೊಳಗಿಸಿದರು. ಇದಕ್ಕೆ ದೇಶಾದ್ಯಂತ ಅಭೂತಪೂರ್ವ ಬೆಂಬಲ ವ್ಯಕ್ತ ವಾಗಿದ್ದು, ಎಲ್ಲರಲ್ಲೂ ರಾಷ್ಟಾçಭಿಮಾನ ಜಾಗೃತಗೊಳ್ಳುತ್ತಿದೆ. ರಾಷ್ಟçದ ಒಳಿತಿಗೆ ನಡೆಯುವ ಯಜ್ಞಗಳಲ್ಲಿ ಪ್ರತಿ ದೇಶಪ್ರೇಮಿಯೂ ಭಾಗಿಯಾಗಬೇಕು ಎಂದರು.

ಕಾರ್ಯಕ್ರಮಲ್ಲಿ ಉಪಸ್ಥಿತರಿದ್ದ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಸ್ವಾತಂತ್ರö್ಯ ಭಾರತಕ್ಕೆ ಬುನಾದಿಯಾಗಿರುವ ಅಂಬೇಡ್ಕರ್ ಅವರ ಸಂವಿಧಾನದAತೆ ಎಲ್ಲರೂ ನಡೆದುಕೊಳ್ಳಬೇಕು. ಪ್ರಜಾಪ್ರಭುತ್ವ ರಾಷ್ಟçದಲ್ಲಿ ಸರ್ವರೂ ಸಮಾನರೆಂಬ ಆಶಯಕ್ಕೆ ಚ್ಯುತಿಯಾಗಬಾರದು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ದೇಶದ ಸ್ವಾತಂತ್ರö್ಯಕ್ಕಾಗಿ ಪ್ರಾಣಾರ್ಪಣೆ ಮಾಡಿದ ಮಹನೀಯರ ಸ್ಮರಣೆ ಪ್ರತಿನಿತ್ಯ ನಡೆಯಬೇಕು ಎಂದರು. ವೇದಿಕೆಯಲ್ಲಿ ನಿಗಮ ಮಂಡಳಿ ಅಧ್ಯಕ್ಷ ರವಿ ಕಾಳಪ್ಪ, ಪ.ಪಂ. ಅಧ್ಯಕ್ಷ ಪಿ.ಕೆ. ಚಂದ್ರು, ಪಕ್ಷದ ಮುಖಂಡರು ಗಳಾದ ಬಿ.ಬಿ. ಭಾರತೀಶ್, ದರ್ಶನ್ ಜೋಯಪ್ಪ, ಮಂಜುಳಾ ಸುಬ್ರಮಣಿ, ಹೆಚ್.ಕೆ. ಮಾದಪ್ಪ, ಮನುಕುಮಾರ್ ರೈ, ಚಂದ್ರಶೇಖರ್, ಎಸ್.ಎ. ಪ್ರತಾಪ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಕೂಡಿಗೆ ನೃತ್ಯ ಶಾಲೆಯ ವಿದ್ಯಾರ್ಥಿಗಳಿಂದ ಮೂಡಿಬಂದ ದೇಶಾಭಿಮಾನವನ್ನು ಪ್ರಕಟಗೊಳಿಸುವ ನೃತ್ಯರೂಪಕಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.