ಮಡಿಕೇರಿ, ಆ. ೧೭: ಇಲ್ಲಿನ ಶ್ರೀ ಕಂಚಿ ಕಾಮಾಕ್ಷಿ ದೇವಾಲಯದಲ್ಲಿ ಪ್ರತಿ ವರ್ಷ ವಿಶೇಷವಾಗಿ ಆರಾಧಿಸುವ ಶ್ರೀ ಕೃಷ್ಣ ಜಯಂತಿಯನ್ನು ತಾ. ೧೮ ರಂದು (ಇಂದು) ರಾತ್ರಿ ದೇವಾಲಯದಲ್ಲಿ ವಿಶೇಷ ಪೂಜೆ, ಭಜನೆಯೊಂದಿಗೆ ಆಚರಿಸಲಾಗುತ್ತಿದೆ. ಕೃಷ್ಣ ಜಯಂತಿ ಪ್ರಯುಕ್ತ ನಡೆಯುವ ಮೊಸರು ಕುಡಿಕೆ ಒಡೆಯುವ ಕಾರ್ಯಕ್ರಮ ತಾ. ೨೦ ರಂದು ಅಪರಾಹ್ನ ೩ ಗಂಟೆಗೆ ನೆರವೇರಲಿದೆ. ೫ ವರ್ಷದೊಳಗಿನ ಮಕ್ಕಳಿಗೆ ಶ್ರೀ ಕೃಷ್ಣ ಛದ್ಮವೇಷ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ೭೦೧೯೨೫೨೩೬೬ ಅಥವಾ ೯೯೦೧೩೧೪೧೦೫ ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಆಡಳಿತ ಮಂಡಳಿ ಕೋರಿದೆ.