ವಿಮಾನದಲ್ಲಿ ಮಾಸ್ಕ್ ಹಾಕದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ
ನವದೆಹಲಿ, ಆ. ೧೭: ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಕರು ವಿಮಾನಗಳಲ್ಲಿ ಮಾಸ್ಕ್ ಧರಿಸುವುದನ್ನು ಖಚಿತಪಡಿಸಿಕೊಳ್ಳಲು ವಿಮಾನಯಾನ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ. ಪ್ರಯಾಣಿಕರು ಕೋವಿಡ್ ನಿರ್ದೇಶನಗಳನ್ನು ಅನುಸರಿಸದಿದ್ದಲ್ಲಿ ಪ್ರಯಾಣಿಕರ ವಿರುದ್ಧ ವಿಮಾನಯಾನ ಸಂಸ್ಥೆಗಳು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತವೆ. ವಿಮಾನ ನಿಲ್ದಾಣಗಳಲ್ಲಿ ಮತ್ತು ವಿಮಾನಯಾನ ಸಂಸ್ಥೆಗಳು ಮತ್ತು ಪ್ರಯಾಣಿಕರ ಮೇಲೆ ತಪಾಸಣೆ ನಡೆಸಲಾಗುವುದು ಎಂದು ಡಿಜಿಸಿಎ ತಿಳಿಸಿದೆ. ಪ್ರಯಾಣದ ಉದ್ದಕ್ಕೂ ಪ್ರಯಾಣಿಕರು ಫೇಸ್‌ಮಾಸ್ಕ್ಗಳನ್ನು ಸರಿಯಾಗಿ ಧರಿಸಿರುವುದನ್ನು ವಿಮಾನಯಾನ ಸಂಸ್ಥೆಗಳು ಖಚಿತಪಡಿಸಿಕೊಳ್ಳಬೇಕು ಎಂದು ಡಿಜಿಸಿಎ ತಿಳಿಸಿದೆ.
‘ರೋಹಿಂಗ್ಯಾಗಳಿಗೆ ಫ್ಲ್ಯಾಟ್': ಅಂತಹ ಯಾವುದೇ ನಿರ್ದೇಶನ ನೀಡಿಲ್ಲ
ನವದೆಹಲಿ, ಆ. ೧೭: ದೆಹಲಿಯಲ್ಲಿರುವ ರೋಹಿಂಗ್ಯಾ ಮುಸ್ಲಿಮರಿಗೆ ಇಡಬ್ಲ್ಯುಎಸ್ ಫ್ಲಾಟ್‌ಗಳನ್ನು ನೀಡಲು ಯಾವುದೇ ನಿರ್ದೇಶನ ನೀಡಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ (ಎಂಹೆಚ್‌ಎ) ಬುಧವಾರ ಸ್ಪಷ್ಟಪಡಿಸಿದೆ. ಅಕ್ರಮ ವಿದೇಶಿಗರು ಅವರ ಪ್ರಸ್ತುತ ಸ್ಥಳದಲ್ಲಿಯೇ ಇರುವುದನ್ನು ಖಚಿತಪಡಿಸಿಕೊಳ್ಳುವಂತೆ ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಸೂಚಿಸಿದೆ. ರೋಹಿಂಗ್ಯಾ ನಿರಾಶ್ರಿತರನ್ನು ದೆಹಲಿಯ ಹೊರಭಾಗದಲ್ಲಿರುವ ಬಕ್ಕರ್‌ವಾಲಾದ ಅಪಾರ್ಟ್ಮೆಂಟ್‌ಗಳಿಗೆ ಸ್ಥಳಾಂತರಿಸಲಾಗುವುದು ಮತ್ತು ಅವರಿಗೆ ಮೂಲಭೂತ ಸೌಕರ್ಯಗಳು, ಪೊಲೀಸ್ ಭದ್ರತೆಯನ್ನು ಒದಗಿಸಲಾಗುವುದು ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಬುಧವಾರ ಹೇಳಿದ್ದರು. ಹರ್ದೀಪ್ ಸಿಂಗ್ ಪುರಿ ಹೇಳಿಕೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಕೇಂದ್ರ ಗೃಹ ಸಚಿವಾಲಯ, ಕಾನೂನಿನ ಪ್ರಕಾರ ರೋಹಿಂಗ್ಯಾ ಅಕ್ರಮ ವಿದೇಶಿಗರನ್ನು ಗಡಿಪಾರು ಮಾಡುವವರೆಗೆ ಅವರನ್ನು ಬಂಧನ ಕೇಂದ್ರಗಳಲ್ಲಿ ಇರಿಸಲಾಗುವುದು ಮತ್ತು ಅವರು ವಾಸ್ತವ್ಯದ ಪ್ರಸ್ತುತ ಸ್ಥಳವನ್ನು ಬಂಧನ ಕೇಂದ್ರವೆAದು ಘೋಷಿಸಲು ದೆಹಲಿ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದೆ. ರೋಹಿಂಗ್ಯಾ ಅಕ್ರಮ ವಿದೇಶಿಯರ ಕುರಿತು ಕೆಲವು ಮಾಧ್ಯಮಗಳ ವರದಿಗಳಿಗೆ ಸಂಬAಧಿಸಿದAತೆ, ದೆಹಲಿಯಲ್ಲಿ ರೋಹಿಂಗ್ಯಾ ಅಕ್ರಮ ವಲಸಿಗರಿಗೆ ಫ್ಲಾಟ್‌ಗಳನ್ನು ನೀಡಲು ಕೇಂದ್ರ ಗೃಹ ಸಚಿವಾಲಯ ಯಾವುದೇ ನಿರ್ದೇಶನಗಳನ್ನು ನೀಡಿಲ್ಲ ಎಂದು ಎಂಹೆಚ್‌ಎ ವಕ್ತಾರರು ತಿಳಿಸಿದ್ದಾರೆ. ದೇಶದಲ್ಲಿ ಆಶ್ರಯ ಪಡೆದವರನ್ನು ಭಾರತ ಯಾವಾಗಲೂ ಸ್ವಾಗತಿಸುತ್ತದೆ. ಎಲ್ಲಾ ರೋಹಿಂಗ್ಯಾ ನಿರಾಶ್ರಿತರನ್ನು ದೆಹಲಿಯ ಬಕ್ಕರ್‌ವಾಲಾ ಪ್ರದೇಶದ ಇWS ಫ್ಲಾಟ್‌ಗಳಿಗೆ ಸ್ಥಳಾಂತರಿಸಲಾಗುವುದು. ಅವರಿಗೆ ಮೂಲಭೂತ ಸೌಕರ್ಯಗಳು, ರಾತ್ರಿಯಿಡೀ ದೆಹಲಿ ಪೊಲೀಸರಿಂದ ಭದ್ರತೆ ನೀಡಲಾಗುತ್ತದೆ ಎಂದು ಹರ್ದೀಪ್ ಸಿಂಗ್ ಪುರಿ ಹೇಳಿದ್ದರು. ಉದ್ದೇಶಪೂರ್ವಕವಾಗಿ ಸಿಎಎ ಮತ್ತು ನಿರಾಶ್ರಿತರ ಯೋಜನೆಯನ್ನು ಜೋಡಿಸಿ ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ದೇಶದ ಆಶ್ರಯವನ್ನು ಅರಸಿ ಬಂದವರಿಗೆ ಆಶ್ರಯ ಕೊಡಲಿದ್ದೇವೆ. ಭಾರತ ೧೯೫೧ ರ ನಿರಾಶ್ರಿತರ ಸಮಾವೇಶವನ್ನು ಗೌರವಿಸುತ್ತದೆ. ಜನಾಂಗ, ಧರ್ಮ ಅಥವಾ ಧರ್ಮವನ್ನು ಲೆಕ್ಕಿಸದೇ ಎಲ್ಲರಿಗೂ ಆಶ್ರಯ ನೀಡುತ್ತದೆ ಎಂದು ಹರ್ದೀಪ್ ಸಿಂಗ್ ಪುರಿ ಟ್ವೀಟ್ ಮಾಡಿದ್ದರು.
ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಮನವಿ
ಬೆಂಗಳೂರು, ಆ. ೧೭: ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಮನವಿ ಬಂದಿದೆ. ಆದರೆ ಹಬ್ಬ ಆಚರಣೆ ವಿಚಾರವನ್ನು ಸಿಎಂ ಜೊತೆ ಚರ್ಚೆ ಮಾಡುತ್ತೇನೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಇಂದು ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಡಿಸಿಗೆ ಮನವಿ ಪತ್ರ ಬಂದಿದೆ. ಈಗ ಆ ಜಾಗ ಕಂದಾಯ ಇಲಾಖೆಗೆ ಸೇರಿದೆ. ಅಲ್ಲಿ ಏನು ಆಗಬೇಕು ಎಂದು ತೀರ್ಮಾನ ಮಾಡುವ ಅಧಿಕಾರ ಸರ್ಕಾರಕ್ಕೆ ಇದೆ. ಬೇರೆ ಯಾರಿಗೂ ಆ ಅಧಿಕಾರ ಇಲ್ಲ. ೭೫ ವರ್ಷದಲ್ಲಿ ಆ ಮೈದಾನದಲ್ಲಿ ಧ್ವಜ ಹಾರಿಸಿರಲಿಲ್ಲ. ಈಗ ತಾನು ಕಂದಾಯ ಸಚಿವನಾದ ಬಳಿಕ, ಮೊದಲ ಬಾರಿಗೆ ಧ್ವಜ ಹಾರಿಸಿದ್ದೇವೆ. ಅಲ್ಲಿನ ಸ್ಥಳೀಯರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ವೀರ ಸಾವರ್ಕರ್ ಫೋಟೋವನ್ನು ಮುಸ್ಲಿಂರ ಏರಿಯಾದಲ್ಲಿ ಹಾಕಿಸಿದ್ಯಾಕೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಆರ್.ಅಶೋಕ್ ಕಿಡಿಕಾರಿದ್ದು, ಸಿದ್ದರಾಮಯ್ಯ ಗೊಂದಲದಲ್ಲಿದ್ದಾರೆ. ಮುಸ್ಲಿಂ ಏರಿಯಾ ಅಂದರೆ ಅದು ಪಾಕಿಸ್ತಾನಕ್ಕೆ ಸೇರಿದ್ಯಾ? ಭಾರತಕ್ಕೆ ಸೇರಿದ್ದಾ? ಮುಸ್ಲಿಂರು ಇರೋ ಮಾತ್ರಕ್ಕೆ ಅದನ್ನು ಪಾಕಿಸ್ತಾನ ಅಂದುಕೊAಡಿದ್ದಾರಾ ಸಿದ್ದರಾಮಯ್ಯ? ಎಂದು ವಾಗ್ದಾಳಿ ನಡೆಸಿದರು. ಸಾವರ್ಕರ್ ದೇಶದ ಸ್ವಾತಂತ್ರ‍್ಯ ಹೋರಾಟದಲ್ಲಿ ಭಾಗಿಯಾದವರು. ಎರಡು ಬಾರಿ ಕರಿನೀರಿನ ಶಿಕ್ಷೆಗೆ ಒಳಗಾದವರು. ಅಂಡಮಾನ್ ಜೈಲಿನಲ್ಲಿದ್ದವರು ಯಾರೂ ಬದುಕಿ ಬಂದಿಲ್ಲ. ಅಂತಹ ಶಿಕ್ಷೆಯನ್ನು ಸಾವರ್ಕರ್ ಅನುಭವಿಸಿದ್ದಾರೆ. ಇವರ ನಾಯಕರುಗಳಿಗೆ ಅಂತ ಶಿಕ್ಷೆ ಯಾಕೆ ಕೊಟ್ಟಿಲ್ಲ? ಟಿಪ್ಪು, ಹೈದರಾಲಿ ಅಂತ ಮೆರೆಯುತ್ತಾರಲ್ಲ. ಅವರಿಗೆ ಯಾಕೆ ಕರಿನೀರಿನ ಶಿಕ್ಷೆ ನೀಡಿಲ್ಲ? ಬ್ರಿಟಿಷರ ಜೊತೆ ಹೋರಾಡಿದ ಸಾವರ್ಕರ್ ಫೋಟೋ ಹಾಕೋಕೆ ಇವರನ್ನು ಯಾಕೆ ಕೇಳಬೇಕು ಎಂದು ಪ್ರಶ್ನಿಸಿದರು. ಯಾವ ಯಾವ ಧರ್ಮದವರು ಇದ್ದಾರೆ ಅಂತ ಇವರನ್ನು ಕೇಳಿ ಹಾಕಬೇಕಾ? ಯಾವ ಧರ್ಮ, ಜಾತಿ ಅಂತ ನೋಡಿ ಫೊಟೊ ಹಾಕೋಕೆ ಸಂವಿಧಾನದ ಅಡಿ ನಿಯಮ ಇದ್ಯಾ? ಸಾವರ್ಕರ್ ಅವರನ್ನು ಒಪ್ಪದೇ ಇರಬಹುದು. ಆದರೆ ಸಾವರ್ಕರ್ ಒಬ್ಬ ದೇಶಭಕ್ತ ಎಂದು ಸಚಿವ ಆರ್. ಅಶೋಕ್ ಹೇಳಿದರು.
ಗಾಜಾ ಪಟ್ಟಿ ಮೇಲೆ ಇಸ್ರೇಲ್ ದಾಳಿ:೫ ಅಪ್ರಾಪ್ತರ ಸಾವು
ಜೆಬಾಲಿಯಾ, ಆ. ೧೭: ಇಸ್ರೇಲ್ ಗಾಜಾ ಪಟ್ಟಿಯ ಮೇಲೆ ವೈಮಾನಿಕ ದಾಳಿ ನಡೆಸಿದ್ದು, ಐವರು ಅಪ್ರಾಪ್ತರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ಬಗ್ಗೆ ಪ್ಯಾಲೆಸ್ಟೇನಿಯನ್ ಮಾನವ ಹಕ್ಕುಗಳ ಸಂಘಟನೆ ಹಾಗೂ ಇಸ್ರೇಲಿ ಸುದ್ದಿ ಪತ್ರಿಕೆ ವರದಿ ಪ್ರಕಟಿಸಿದ್ದು, ಸ್ಮಶಾನದಲ್ಲಿ ಸ್ಫೋಟ ಸಂಭವಿಸಿದೆ ಎಂದು ಹೇಳಿವೆ. ಇಸ್ರೇಲ್‌ನ ಸೇನೆ ಈ ಬಗ್ಗೆ ಹೇಳಿಕೆ ನೀಡಿದ್ದು, ಪ್ಯಾಲೆಸ್ಟೇನ್‌ನ ಇಸ್ಲಾಮಿಕ್ ಜಿಹಾದಿ ಸೇನಾ ಗುಂಪಿನಿAದ ತಪ್ಪಾಗಿ ಕ್ಷಿಪಣಿಗಳು ಸಿಡಿದಿರುವ ಕಾರಣ ಈ ಘಟನೆ ನಡೆದಿರಬಹುದು ಎಂದು ಹೇಳಿದೆ. ೪-೧೬ ವಯಸ್ಸಿನ ೫ ಮಕ್ಕಳು ಸಾವನ್ನಪ್ಪಿದ್ದು, ಅವರು ತಮ್ಮ ಅಜ್ಜನ ಸಮಾಧಿ ಬಳಿ ಸೇರಿದ್ದರು, ಆಗ ಈ ಸ್ಥಳದಲ್ಲಿ ಸ್ಫೋಟ ಸಂಭವಿಸಿದೆ. ಇದಕ್ಕೂ ಮೂರು ದಿನಗಳ ಹಿಂದೆ ಪ್ಯಾಲೆಸ್ಟೇನ್ ಕದನ ವಿರಾಮ ಘೋಷಿಸಿತ್ತು.
ನಿಜವಾದ ಸಿಎಂ ಯಾರೆಂದು ಎಲ್ಲರಿಗೂ ಗೊತ್ತಿದೆ: ಆದಿತ್ಯ ಠಾಕ್ರೆ
ಮುಂಬೈ, ಆ. ೧೭: ಮಹಾರಾಷ್ಟçದ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಅವರು, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ವರ್ಚಸ್ಸನ್ನು ಉಲ್ಲೇಖಿಸುವ ಮೂಲಕ ನಿಜವಾದ ಮುಖ್ಯಮಂತ್ರಿ ಯಾರು ಎಂಬುದು ಎಲ್ಲರಿಗೂ ತಿಳಿದಿದೆ ಎಂದು ಬುಧವಾರ ಹೇಳಿದ್ದಾರೆ. ನಿಜವಾದ ಮುಖ್ಯಮಂತ್ರಿ ಯಾರೆಂದು ಈಗ ಎಲ್ಲರಿಗೂ ತಿಳಿದಿದೆ ಎಂದು ಗೃಹ, ಹಣಕಾಸು ಮತ್ತು ಇತರ ಪ್ರಮುಖ ಖಾತೆಗಳನ್ನು ಹೊಂದಿರುವ ಫಡ್ನವಿಸ್ ಅವರೇ ನಿಜವಾದ ಸಿಎಂ ಎಂದು ಆದಿತ್ಯ ಠಾಕ್ರೆ ಏಕನಾಥ್ ಶಿಂಧೆಗೆ ಟಾಂಗ್ ನೀಡಿದ್ದಾರೆ. ಸಂಪುಟ ವಿಸ್ತರಣೆಯ ಬಗ್ಗೆ ಕಿಡಿಕಾರಿರುವ ಆದಿತ್ಯ ಠಾಕ್ರೆ, ಸಂಪುಟದಲ್ಲಿ ಮುಂಬೈನ ಧ್ವನಿಯಾಗಲೀ ಅಥವಾ ಮಹಿಳಾ, ಪಕ್ಷೇತರ ಶಾಸಕರ ಧ್ವನಿ ಕೇಳಲ್ಲೇ ಇಲ್ಲ ಎಂದಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಕಳೆದ ವಾರ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದರು. ಬಂಡಾಯ ಶಿವಸೇನೆ ಪಾಳೆಯದಿಂದ ಮತ್ತು ಬಿಜೆಪಿಯಿಂದ ತಲಾ ಒಂಬತ್ತು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಈ ವೇಳೆ ಯಾವುದೇ ಮಹಿಳಾ ಶಾಸಕರಿಗೆ ಅಥವಾ ಪಕ್ಷೇತರ ಶಾಸಕರಿಗೆ ಸಚಿವ ಸ್ಥಾನ ನೀಡಿಲ್ಲ. ಜೂನ್‌ನಲ್ಲಿ ಶಿವಸೇನೆ ನಾಯಕತ್ವದ ವಿರುದ್ಧ ಶಿಂಧೆ ಬಂಡಾಯವೆದ್ದಾಗ ಅವರೊಂದಿಗೆ ಹೊಂದಾಣಿಕೆ ಮಾಡಿಕೊಂಡ ಮೊದಲ ೧೪ ರಿಂದ ೧೫ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ. ಹಾಗಾಗಿ ನಿಷ್ಠೆಗೆ ಸ್ಥಾನವಿಲ್ಲ ಎಂದು ಮಾಜಿ ಸಚಿವ ಆದಿತ್ಯ ಠಾಕ್ರೆ ಅವರು ರಾಜ್ಯ ವಿಧಾನಸಭೆಯ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಲೇವಡಿ ಮಾಡಿದ್ದಾರೆ.