ಮಡಿಕೇರಿ, ಆ.೧೭: ಪ್ರಸಕ್ತ (೨೦೨೨-೨೩) ಸಾಲಿನಲ್ಲಿ ೭೫ನೇ ಸ್ವಾತಂತ್ರö್ಯ ಅಮೃತ ಮಹೋತ್ಸವ ಪ್ರಯುಕ್ತ ಜಿಲ್ಲಾ ಬಾಲಭವನ ಸಮಿತಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಜಿಲ್ಲಾ ಮಟ್ಟದಲ್ಲಿ “ಸ್ವಾತಂತ್ರö್ಯ ದಿನಾಚರಣೆ” ಕಾರ್ಯಕ್ರಮವನ್ನು ತಾ. ೨೫ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಶಿಶು ಕಲ್ಯಾಣ ಸಂಸ್ಥೆ (ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಹತ್ತಿರ)ಯಲ್ಲಿ ನಡೆಯಲಿದೆ.

ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದರ ಮೂಲಕ ಅವರಲ್ಲಿ ಆತ್ಮಸ್ಥೆöÊರ್ಯ, ಭರವಸೆ ದೃಢವಾದ ವ್ಯಕ್ತಿತ್ವ, ವಿಚಾರವಂತಿಕೆ, ಕಲಾ ಪ್ರತಿಭೆಯನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ೩ ವಿಭಾಗಗಳಾಗಿ ವಿಂಗಡಿಸಿ ೫ ರಿಂದ ೧೬ ವರ್ಷ ಮಕ್ಕಳಿಗೆ ಚಿತ್ರಕಲೆ ಹಾಗೂ ದೇಶಭಕ್ತಿ ಗೀತೆ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ.

ವಿಜೇತ ಮಕ್ಕಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮಾಧಾನಕರ ಬಹುಮಾನ ಮತ್ತು ಪ್ರಮಾಣ ಪತ್ರ ನೀಡಲಾಗುತ್ತದೆ. ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಸಕ್ತಿ ಇರುವ ಮಕ್ಕಳು ತಾ. ೨೩ರೊಳಗೆ ಕಚೇರಿ ದೂ.ಸಂ. ೦೮೨೭೨-೨೯೮೩೭೯, ೮೬೧೮೮೬೧೫೦೫, ೬೩೬೩೨೮೫೬೮೫ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವAತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ತಿಳಿಸಿದ್ದಾರೆ.