ಮಡಿಕೇರಿ, ಆ. ೧೭: ಸಹಮತ ವೇದಿಕೆ ಹಾಗೂ ಅಹಿಂದ ಒಕ್ಕೂಟದ ವತಿಯಿಂದ ಸಾಮಾಜಿಕ ಸುಧಾರಣೆಯ ಹರಿಕಾರರಾಗಿರುವ ಮಾಜಿ ಮುಖ್ಯಮಂತ್ರಿ ದಿ.ದೇವರಾಜು ಅರಸು ಅವರ ೧೦೭ನೇ ಜನ್ಮದಿನಾಚರಣೆ ಕಾರ್ಯಕ್ರಮ ತಾ. ೨೦ ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಸಹಮತ ವೇದಿಕೆ ಅಧ್ಯಕ್ಷ ಟಿ.ಪಿ.ರಮೇಶ್ ಮಾಹಿತಿ ನೀಡಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ೧೧.೩೦ ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಇದರೊಂದಿಗೆ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಮೀಸಲಾತಿ ಕಲ್ಪಿಸುವ ಸಲುವಾಗಿ ಎಲ್.ಜಿ. ಹಾವನೂರು ಅವರ ಅಧ್ಯಕ್ಷತೆಯಲ್ಲಿ ಹಿಂದುಳಿದ ವರ್ಗಗಳ ಬಗ್ಗೆ ಅಧ್ಯಯನ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಲು ರಚಿಸಿದ್ದ ಹಿಂದುಳಿದ ವರ್ಗಗಳ ಆಯೋಗ ವರದಿ ಅನುಷ್ಠಾನಗೊಂಡು ೫೦ ವರ್ಷ ಪೂರೈಸಿದ ಹಿನ್ನೆಲೆ ಅವರನ್ನು ಸ್ಮರಿಸುವ ಕಾರ್ಯಕ್ರಮ ಇದೇ ಸಂದರ್ಭ ನಡೆಯಲಿದೆ ಎಂದು ಹೇಳಿದರು.
ಗೋಷ್ಠಿಯಲ್ಲಿ ಅಹಿಂದ ಒಕ್ಕೂಟದ ಅಧ್ಯಕ್ಷ ಟಿ.ಎಂ.ಮುದ್ದಯ್ಯ, ಕಾರ್ಯದರ್ಶಿ ಕೆ.ಜಿ.ಪೀಟರ್, ಸಹಮತ ವೇದಿಕೆ ಸಹ ಕಾರ್ಯದರ್ಶಿ ಲಿಯಾಕತ್ ಅಲಿ ಹಾಜರಿದ್ದರು.