ಚೆಟ್ಟಳ್ಳಿ, ಆ. ೧೭: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವೀರಾಜಪೇಟೆ, ಐಕ್ಯೂಎಸಿ, ಚುನಾವಣಾ ಸಾಕ್ಷರತಾ ಸಂಘ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ, ವೀರಾಜ ಪೇಟೆ ತಾಲೂಕು ಪಂಚಾಯಿತಿಯ ಸಹಯೋಗದೊಂದಿಗೆ ರಾಷ್ಟಿçÃಯ ಚುನಾವಣಾ ಆಯೋಗ - ಚುನಾವಣಾ ಸುಧಾರಣೆಗಳು ಎಂಬ ವಿಷಯದ ಅಡಿಯಲ್ಲಿ ಚುನಾವಣಾ ಜಾಗೃತಿ ಕಾರ್ಯಕ್ರಮ ನಡೆಯಿತು.
ಮತದಾರರ ಪಟ್ಟಿಯಲ್ಲಿರುವ ವಿದ್ಯಾರ್ಥಿಗಳಿಗಾಗಿ ಚುನಾವಣಾ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಸಂಖ್ಯೆಯ ಜೋಡಣಾ ಕಾರ್ಯಕ್ರಮ ನಡೆಯಿತು.
ವೀರಾಜಪೇಟೆ ತಾಲೂಕು ತಹಶೀಲ್ದಾರ್ ಅರ್ಚನಾ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ದೇಶದ ಯುವಶಕ್ತಿಗಳಾಗಿ ರಾಷ್ಟçರಕ್ಷಣೆ ಮಾತ್ರವಲ್ಲದೇ ಚುನಾವಣೆಗಳಂತಹ ರಾಜಕೀಯ ಪ್ರಕ್ರಿಯೆಗಳಲ್ಲಿ ಪಾಲ್ಗೊಳ್ಳಬೇಕು. ಇಲ್ಲಿನ ವಿದ್ಯಾವಂತ ಯುವ ಸಮೂಹವು ತಮ್ಮ ಮೂಲಭೂತ ಕರ್ತವ್ಯಗಳನ್ನು ನಿರ್ವಹಿಸು ವುದಲ್ಲದೇ, ಸ್ಥಾಪನೆಗೆ ಪ್ರೇರಣೆಯಾಗಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಹಾಜರಿದ್ದ ಕೃಷ್ಣ ಹಾಗೂ ಗಣೇಶ್, ಚುನಾವಣಾ ಆಯೋಗದ `ವೋಟರ್ ಹೆಲ್ಪ್ ಲೈನ್' ಮೊಬೈಲ್ ಅಪ್ಲಿಕೇಶನ್ನ ಮಹತ್ವವನ್ನು ವಿವರಿಸಿದರು.
ಈಗಾಗಲೇ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿ ಕೊಂಡಿರುವ ವಿದ್ಯಾರ್ಥಿಗಳ ಚುನಾವಣಾ ಗುರುತಿನ ಚೀಟಿಯನ್ನು ಆಧಾರ್ ಸಂಖ್ಯೆಯೊAದಿಗೆ ಜೋಡಣೆ ಮತ್ತು ೧೮ ವರ್ಷ ತುಂಬಿದ ವಿದ್ಯಾರ್ಥಿಗಳಿಂದ ಮತದಾರರ ಪಟ್ಟಿಯ ಸೇರ್ಪಡೆಯ ಕುರಿತಾದ ವಿವಿಧ ಹಂತಗಳನ್ನು ಪ್ರಾತ್ಯಕ್ಷಿಕೆಯೊಂದಿಗೆ ವಿವರಿಸಿದರು. ಪ್ರಾಂಶುಪಾಲ ಡಾ. ದಯಾನಂದ ಕೆ.ಸಿ. ಮಾತನಾಡಿದರು.
ವೇದಿಕೆಯಲ್ಲಿ ಕಾಲೇಜಿನ ಚುನಾವಣಾ ಸಾಕ್ಷರತಾ ಸಂಘದ ಸಂಚಾಲಕರು ಹಾಗೂ ರಾಜ್ಯಶಾಸ್ತç ವಿಭಾಗದ ಮುಖ್ಯಸ್ಥೆ ದಿವ್ಯ ಎಂ.ಬಿ., ಕ್ಷೇಮಪಾಲನಾ ಸಮಿತಿಯ ಸಂಚಾಲಕಿ ಸುನಿತಾ ಎಂ.ಎA., ಐಕ್ಯೂಎಸಿ ಸಂಚಾಲಕ ವೇಣುಗೋಪಾಲ್ ಹೆಚ್.ಎಸ್., ವೀರಾಜಪೇಟೆ ತಾಲೂಕು ಪಂಚಾಯಿತಿಯ ಸುಧೀರ್ ಉಪಸ್ಥಿತರಿದ್ದರು.