ವೀರಾಜಪೇಟೆ, ಆ.೧೭: ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಬದ್ಧ ಸಂಸ್ಕೃತಿಯನ್ನು ಬೆಳೆಸಿಕೊಂಡು ಎಲೆಮರೆಯ ಕಾಯಿಯಂತಿರುವ ತಮ್ಮ ಪ್ರತಿಭೆಗಳನ್ನು ಹೊರ ಹೊಮ್ಮಲು ವೇದಿಕೆಯ ಅವಕಾಶವನ್ನು ಬಳಸಿಕೊಂಡು ಜೀವನದಲ್ಲಿ ಛಲದಿಂದ ಗುರಿ ಮುಟ್ಟುವಂತಾಗ ಬೇಕು ಎಂದು ಅಮ್ಮತ್ತಿಯ ಕೃಷಿಕರಾದ ಕೇಚಂಡ ಎಂ.ಕುಶಾಲಪ್ಪ ಹೇಳಿದರು.

ವೀರಾಜಪೇಟೆಯ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟಿçÃಯ ಸೇವಾ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಗಿಡಕ್ಕೆ ನೀರು ಎರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕುಶಾಲಪ್ಪ ಅವರು ವಿದ್ಯಾರ್ಥಿಗಳು ದುಶ್ಚಟಗಳನ್ನು ದೂರಮಾಡಿ ಜೀವನದ ಭವಿಷ್ಯವನ್ನು ರೂಪಿಸಿಕೊಳ್ಳುವುದರೊಂದಿಗೆ ಗುರು ಹಿರಿಯರಿಗೆ ಗೌರವ ನೀಡುವ ಮೂಲಕ ಸಮಾಜದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಹೋಗಲಾಡಿಸಲು ಇಂದಿನ ಯುವ ಶಕ್ತಿಗಳು ಮುಂದೆ ಬರಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾವೇರಿ ಪದವಿ ಕಾಲೇಜಿನ ಉಪ ಪ್ರಾಂಶುಪಾಲೆ ದಮಯಂತಿ ಅವರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಯಶಸ್ಸು ಕಾಣಲು ಸಿಗುವಂತ ಉತ್ತಮ ಅವಕಾಶಗಳನ್ನು ಬಳಸಿಕೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ತೋರುವಂತಾಗಬೇಕು. ಜೀವನದಲ್ಲಿ ಗುರಿಯನ್ನಿಟ್ಟುಕೊಂಡು ಸಾಧನೆ ಮಾಡುವ ಮೂಲಕ ಪೋಷಕರಿಗು ಮತ್ತು ಶಿಕ್ಷಕರಿಗು ಕೀರ್ತಿತರುವಂತಾಗಬೇಕು ಎಂದರು.

ವೇದಿಕೆಯಲ್ಲಿ ಕೃಷಿಕರಾದ ಕೊಕ್ಕಂಡ ಕಾವೇರಪ್ಪ ಉಪಸ್ಥಿತರಿದ್ದು ಮಾತನಾಡಿದರು, ಎನ್.ಎಸ್.ಎಸ್. ಯೋಜನಾಧಿಕಾರಿ ಗಾಯಿತ್ರಿ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳಾದ ಮೈನಾ ಮತ್ತು ತಂಡದಿAದ ರಾಷ್ಟಿçÃಯ ಸೇವಾ ಯೋಜನೆ ಗೀತೆಗಳು, ಆತ್ಮೀಕ ಮತ್ತು ಸ್ವಪ್ನ ನಿರೂಪಿಸಿದರೆ, ಭುವನೇಶ್ವರಿ ವಂದಿಸಿದರು.