ಮಡಿಕೇರಿ, ಆ. ೧೯ : ಮಂಗಳೂರು ವಿಶ್ವವಿದ್ಯಾನಿಲಯ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ‘ಸಮನ್ವಯ ೨೦೨೨’ ಉದ್ಘಾಟನಾ ಕಾರ್ಯಕ್ರಮವು ತಾ. ೨೦ ರಂದು (ಇಂದು) ಬೆಳಿಗ್ಗೆ ೯.೩೦ ಗಂಟೆಗೆ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ಭಾರತ ಮಹಿಳಾ ಹಾಕಿ ತಂಡದ ಸಹಾಯಕ ಕೋಚ್ ಅಂಕಿತಾ ಸುರೇಶ್, ರೇಡಿಯಾಲಜಿಸ್ಟ್ ಡಾ. ಮಂಥರ್ ಗೌಡ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಡಾ. ಸಿ. ಜಗತ್ ತಿಮ್ಮಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.