ಚೆಟ್ಟಳ್ಳಿ, ಆ. ೧೮: ೨೦೨೧-೨೨ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. ೧೦೦ ರಷ್ಟು ಫಲಿತಾಂಶ ಗಳಿಸಿರುವುದಕ್ಕೆ ಚೆಟ್ಟಳ್ಳಿ ಪ್ರೌಢಶಾಲೆಯ ಶಿಕ್ಷಕ ಸಿಬ್ಬಂದಿಯನ್ನು ಶಾಲಾ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಪೇರಿಯನ ಜಯಾನಂದ ವಹಿಸಿದ್ದರು. ಈ ಸಂದರ್ಭ ಶಾಲಾ ಆಡಳಿತ ಮಂಡಳಿ ಸಂಚಾಲಕ ಮುಳ್ಳಡ ರತ್ತು ಚಂಗಪ್ಪ ಸೇರಿದಂತೆ ಶಾಲಾ ಮುಖ್ಯೋಪಾ ಧ್ಯಾಯ ಜಿ.ಸಿ. ಸತ್ಯನಾರಾಯಣ ಹಾಗೂ ಶಿಕ್ಷಕ ವೃಂದದವರು ಹಾಜರಿದ್ದರು. ನಿರ್ದೇಶಕ ಪುತ್ತರಿರ ಕಾಶಿ ಸುಬ್ಬಯ್ಯ ವಂದಿಸಿದರು.