ಮಡಿಕೇರಿ, ಆ. ೧೯ : ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ತಾ. ೨೬ ರಂದು ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣ ಮತ್ತು ತಾ. ೨೯ ರಂದು ವೀರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೧ ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ಸ್ವೀಕರಿಸಲಿದ್ದಾರೆ.
ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ.
ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ದೂ. ಸಂ. ೦೮೨೭೨-೨೯೫೨೯೭ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.