ಮಡಿಕೇರಿ, ಆ. ೧೮ : ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ದಿಸೆಯಲ್ಲಿ ಮಕ್ಕಂದೂರು, ಪೆರಾಜೆ, ನಿಟ್ಟೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ, ಚಿಕ್ಕರೇಷ್ಮೆ ಹಾಡಿ ಗ್ರಾ.ಪಂ. ಸಮುದಾಯ ಭವನ, ಶಿರಂಗಾಲ ಹಾಲಿನ ಡೈರಿ ಸಭಾಂಗಣ, ನಾಕೂರು ಗ್ರಾ.ಪಂ. ಸಮುದಾಯ ಭವನದಲ್ಲಿ ಮತ್ತು ಬಡಬನಹಳ್ಳಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ತಾ. ೨೦ ರಂದು ಬೆಳಿಗ್ಗೆ ೧೧ ಗಂಟೆಗೆ ವಿದ್ಯುತ್ ಅದಾಲತ್ ನಡೆಯಲಿದೆ.
ಸಾರ್ವಜನಿಕರು / ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಅಹವಾಲುಗಳನ್ನು ಸಲ್ಲಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಅನಿತಾ ಬಾಯಿ ತಿಳಿಸಿದ್ದಾರೆ.