ಮಡಿಕೇರಿ, ಆ. ೧೮ : ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಹಿಂದುಳಿದ ಪ್ರವರ್ಗ-೩ಎ ನಲ್ಲಿ ನಮೂದಾಗಿರುವ (ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ಗಂಗಡ್ ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಹಳ್ಳಿಕಾರ್, ಕುಂಚೆಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮಾರೆಡ್ಡಿ, ಗೌಡರ್, ನಾಮಧಾರಿ ಗೌಡ, ಉಪ್ಪಿನ ಕೊಳಗ, ಉತ್ತಮ ಕೊಳಗ) ಒಕ್ಕಲಿಗ ಸಮುದಾಯದ ಜನರ ಆರ್ಥಿಕ ಅಭಿವೃದ್ಧಿಗಾಗಿ ೨೦೨೨-೨೩ ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ಸಾಲ ಯೋಜನೆ, ನಿರುದ್ಯೋಗಿಗಳಿಗೆ ಟೂರಿಸ್ಟ್ ಟ್ಯಾಕ್ಸಿ ಮತ್ತು ಸರಕು ಸಾಗಾಣಿಕೆ ವಾಹನ ಕೊಳ್ಳಲು ಸಹಾಯಧನ, ಗಂಗಾ ಕಲ್ಯಾಣ ವೈಯಕ್ತಿಕ/ ಸಾಮೂಹಿಕ ಯೋಜನೆಗಳಲ್ಲಿ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ತಾ. ೩೦ ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಮಹಾದೇವಿ ಅವರು ತಿಳಿಸಿದ್ದಾರೆ