ಸೋಮವಾರಪೇಟೆ, ಆ.೧೯: ಕಂದಾಯ ಇಲಾಖೆಯ ವತಿಯಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ತಾಲೂಕಿನ ಶನಿವಾರಸಂತೆ ಹೋಬಳಿ ದುಂಡಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ, ತಾ. ೨೦ರಂದು ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ ಎಂದು ತಹಶೀಲ್ದಾರ್ ಗೋವಿಂದರಾಜು ತಿಳಿಸಿದ್ದಾರೆ.