ಮಡಿಕೇರಿ, ಆ. ೧೯: ಕ.ರಾ.ವಿ.ಪ.ವತಿಯಿಂದ ತಾ. ೨೦ರಂದು (ಇಂದು) ಮಡಿಕೇರಿ ಸರಕಾರಿ ಜೂನಿಯರ್ ಕಾಲೇಜಿನ ಜಿಮ್ನಾಸ್ಟಿಕ್ ಸಭಾಂಗಣದಲ್ಲಿ ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೧ ಗಂಟೆ ತನಕ ಪ್ರೌಢಶಾಲಾ ಮಕ್ಕಳಿಗೆ ಜಿಲ್ಲಾಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ.

ಇದೇ ವೇಳೆಗೆ ರಾಷ್ಟಿçÃಯ ವೈಜ್ಞಾನಿಕ ಮನೋವೃತ್ತಿ ದಿನವನ್ನು ಸರಳವಾಗಿ ಆಚರಿಸಲಾಗುವುದು.

ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಮಾಲಿನ್ಯ ನಿಯಂತ್ರಣ ಮಂಡಳಿಯ ಜೊತೆಗೂಡಿ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಕುರಿತು ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಗುವುದು.