ಮಡಿಕೇರಿ, ಆ. ೧೮: ನಗರದ ಜಿಲ್ಲಾಧಿಕಾರಿ ಕಚೇರಿ ತಡೆಗೋಡೆ ಕಾಮಗಾರಿ ಕಳಪೆಯಾಗಿದ್ದು, ಕೊಡಗಿನ ಬಿಜೆಪಿ ಶಾಸಕರು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಳಪೆ ಕಾಮಗಾರಿಯನ್ನು ಮುಚ್ಚಿಡುವುದಕ್ಕಾಗಿಯೇ ತಾನು ಬಂದಾಗ ತನ್ನ ವಿರುದ್ಧ ಪ್ರತಿಭಟನೆ ಮಾಡಲಾಗಿದೆ ಎಂದು ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಕೊಡಗಿನಲ್ಲಿ ಮುಂದಿನ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲಲಿದೆ ಎಂಬ ಹತಾಶೆಯೂ ತನ್ನ ವಿರುದ್ಧದ ಪ್ರತಿಭಟನೆಗೆ ಕಾರಣವಾಗಿದೆ.

ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ? ನಾವೂ ಅದನ್ನೆಲ್ಲಾ ಮಾಡಿಕೊಂಡೆ ಬಂದಿರೋದು. ನಾವು ಹೋರಾಟ ಮಾಡೋಕೆ

(ಮೊದಲ ಪುಟದಿಂದ) ಪ್ರಾರಂಭ ಮಾಡಿದರೆ ಸಿ.ಎಂ. ಎಲ್ಲೂ ಓಡಾಡೋಕೆ ಆಗಲ್ಲ. ನಮ್ಮ ಕಾರ್ಯಕರ್ತರು ಬೀದಿಗಿಳಿದ್ರೆ ಬಿಜೆಪಿಯವರಿಗೆ ಕೊಡಗಿನಲ್ಲೇ ತಿರುಗಾಡೋಕೆ ಆಗಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಟಿಪ್ಪು ವಿಚಾರನೂ ಇಲ್ಲ ಏನೂ ಇಲ್ಲ ಟಿಪ್ಪು ಜಯಂತಿ ನಂತರವೂ ನಾನು ಕೊಡಗಿಗೆ ಬಂದಿದ್ದೆ. ಆಗ ಏಕೆ ಪ್ರತಿಭಟನೆ ಮಾಡಲಿಲ್ಲ. ಕಳಪೆ ಕೆಲಸ ನನಗೆ ಗೊತ್ತಾಗದಿರಲಿ ಎಂದು ಈಗ ಪ್ರತಿಭಟನೆ ಮಾಡಿದ್ದಾರೆ.

ಕಳಪೆ ಕಾಮಗಾರಿ ಮುಚ್ಚಿಡಲು ಪ್ರತಿಭಟನೆ ನಾಟಕ ಮಾಡುತ್ತಿದ್ದಾರೆ. ರಾಜ್ಯದಲ್ಲಿರುವುದು ೪೦% ಕಮಿಷನ್ ಸರ್ಕಾರ. ಬಿಜೆಪಿ ಕಂಟ್ರಾö್ಯಕ್ಟರ್ ಚುನಾಯಿತ ಪ್ರತಿನಿಧಿಗಳು ಬಿಜೆಪಿ ಸೇರಿ ಲೂಟಿ ಹೊಡೆಯುತ್ತಿದ್ದಾರೆ. ಈ ಬಗ್ಗೆ ಇದನ್ನು ನಾನು ವಿಧಾನಸಭೆಯಲ್ಲಿ ಪ್ರಸ್ತಾಪಿಸುತ್ತೇನೆ. ಮುಂದಿನ ಬಾರಿ ನಾನು ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.