ಮಡಿಕೇರಿ, ಆ. ೧೮ : ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಸದ್ಭಾವನಾ ದಿನಾಚರಣೆ’ ಪ್ರಯುಕ್ತ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ ಪ್ರತಿಜ್ಞಾವಿಧಿ ಬೋಧಿಸಿದರು.
ಬಳಿಕ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಎಲ್ಲಾ ಧರ್ಮ, ಭಾಷೆ ಹಾಗೂ ಜನರಲ್ಲಿ ಸೌಹಾರ್ದತೆ ಉತ್ತೇಜಿಸಿ ಎಲ್ಲರಲ್ಲೂ ಸದ್ಭಾವನೆ ಮೂಡಿಸಿ ಹಿಂಸಾಚಾರ ತ್ಯಜಿಸುವಂತೆ ಮಾಡುವುದು ಸದ್ಭಾವನಾ ದಿನದ ಉದ್ದೇಶವಾಗಿದೆ ಎಂದರು.
ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇಧ ಭಾವವಿಲ್ಲದೇ ಭಾರತದ ಎಲ್ಲ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು ನಾನು ಪ್ರತಿಜ್ಞೆ ಮಾಡುತ್ತೇನೆ. ಅಲ್ಲದೇ, ವೈಯಕ್ತಿಕವಾಗಿ ಯಾಗಲೀ ಅಥವಾ ಸಾಮೂಹಿಕ ವಾಗಿಯಾಗಲೀ ನಮ್ಮಲ್ಲಿರುವ ಎಲ್ಲ ಬೇಧಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇನೆಂದು ಸಹ ಪ್ರತಿಜ್ಞೆ ಮಾಡುತ್ತೇನೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರತಿಜ್ಞಾವಿಧಿ ಬೋಧಿಸಿದರು. ಜಿಲ್ಲಾಧಿಕಾರಿಯವರ ಕಾನೂನು ಸಲಹೆಗಾರರಾದ ಲೋಕೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪುಟ್ಟರಾಜು, ಜಿಲ್ಲಾ ನೋಂದಣಾಧಿಕಾರಿ ಸಿದ್ದೇಶ್ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಪೊನ್ನಚ್ಚನ ಶ್ರೀನಿವಾಸ್, ಸಿಬ್ಬಂದಿಗಳು ಇತರರು ಇದ್ದರು.