ಮಡಿಕೇರಿ, ಆ. ೧೯ : ವೀರಾಜಪೇಟೆ ತಾಲೂಕಿನ ವೀರಾಜಪೇಟೆ ಹೋಬಳಿ ಬಿಟ್ಟಂಗಾಲ ಗ್ರಾಮದ ಕೊಡಗು ಹೆಗ್ಗಡೆ ಸಮಾಜದಲ್ಲಿ ತಾ. ೨೦ ರಂದು (ಇಂದು) ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ತಾ. ೨೦ ರಂದು ಡಿ.ದೇವರಾಜು ಅರಸು ಅವರ ೧೦೭ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಆಚರಣೆ ಮಾಡಲಿರುವುದರಿಂದ ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿರುವ ಹಿನ್ನೆಲೆ ವೀರಾಜಪೇಟೆ ಹೋಬಳಿಯ ಬಿಟ್ಟಂಗಾಲ ಗ್ರಾಮದ ಕೊಡಗು ಹೆಗ್ಗಡೆ ಸಮಾಜದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಕಾರ್ಯಕ್ರಮ ನಡೆಯಲಿದೆ.

ಜಿಲ್ಲಾಧಿಕಾರಿಯವರು ಡಿ. ದೇವರಾಜು ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದ ನಂತರ ಮಡಿಕೇರಿ ತಾಲೂಕು ಸಂಪಾಜೆ ಹೋಬಳಿ, ಹಾಕತ್ತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕುವೆಂಪು ಶತಮಾನೋತ್ಸವ ಸಭಾಂಗಣದಲ್ಲಿ ನಡೆಯುವ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

ಜಿಲ್ಲಾಧಿಕಾರಿಗಳು ಭಾಗವಹಿಸುವ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸುವಂತೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ತಿಳಿಸಿದ್ದಾರೆ.