ಗುಡ್ಡೆಹೊಸೂರು: ಇಲ್ಲಿಗೆ ಸಮೀಪದ ಬಸವನಹಳ್ಳಿಯ ಲ್ಯಾಂಪ್ಸ್ ಸಹಕಾರ ಸಂಘದ ಆವರಣದಲ್ಲಿ ಧ್ವಜಾರೋಹಣವನ್ನು ಸಂಘದ ಅಧ್ಯಕ್ಷ ಆರ್.ಕೆ.ಚಂದ್ರ ವಯಿಸಿದ್ದರು. ಈ ಸಂದರ್ಭ ಉಪಾಧ್ಯಕ್ಷ ಮನು ಮತ್ತು ಆಡಳಿತಮಂಡಳಿ ಸದಸ್ಯರು, ಕಾರ್ಯನಿರ್ವಹಣಾಧಿಕಾರಿ ಹನಿಕುಮಾರ್ ಮತ್ತು ಸಂಘದ ಸಿಬ್ಬಂದಿಗಳು ಹಾಜರಿದ್ದರು.ಗುಡ್ಡೆಹೊಸೂರು: ಇಲ್ಲಿಗೆ ಸಮೀಪದ ಬಸವನಹಳ್ಳಿಯ ಲ್ಯಾಂಪ್ಸ್ ಸಹಕಾರ ಸಂಘದ ಆವರಣದಲ್ಲಿ ಧ್ವಜಾರೋಹಣವನ್ನು ಸಂಘದ ಅಧ್ಯಕ್ಷ ಆರ್.ಕೆ.ಚಂದ್ರ ವಯಿಸಿದ್ದರು. ಈ ಸಂದರ್ಭ ಉಪಾಧ್ಯಕ್ಷ ಮನು ಮತ್ತು ಆಡಳಿತಮಂಡಳಿ ಸದಸ್ಯರು, ಕಾರ್ಯನಿರ್ವಹಣಾಧಿಕಾರಿ ಹನಿಕುಮಾರ್ ಮತ್ತು ಸಂಘದ ಸಿಬ್ಬಂದಿಗಳು ಹಾಜರಿದ್ದರು.ಬೆಟ್ಟತ್ತೂರು: ಬೆಟ್ಟತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರö್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಹೇಮರಾಜ್ ಅವರು ನೆರವೇರಿಸಿದರು. ವೇದಿಕೆಯಲ್ಲಿ ನಿವೃತ್ತ ಶಿಕ್ಷಕಿ ಸಾವಿತ್ರಿ, ಮದೆ ಗ್ರಾಮ ಪಂಚಾಯಿತಿ ಸದಸ್ಯೆ ಜಾಜಿ, ಶಾಲಾ ಮುಖ್ಯ ಶಿಕ್ಷಕ ಚಂದ್ರು, ಎಸ್‌ಡಿಎಂಸಿ ಸದಸ್ಯ ವಿಜುಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕಡಗದಾಳು: ಕಡಗದಾಳು ಗ್ರಾಮದ ನೀರುಕೊಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ‍್ಯ ದಿನಾಚರಣೆ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಮಾಜಿ ಸೈನಿಕರು, ಶಾಲಾ ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಚೆಟ್ರಂಡ ನವೀನ್ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಳಿನಿ ಕಾವೇರಪ್ಪ ಅವರು ವಹಿಸಿದ್ದರು. ಮಾಜಿ ಸೈನಿಕ ಪ್ರಭಾಕರ್, ಮಾಲೇರ ವಿಜು ಕಾರ್ಯಪ್ಪ, ಸಜೀರ್ ಎನ್ ಎಂ. ಜನಾರ್ದನ ಅವರು ಈ ಕಾರ್ಯಕ್ರಮದ ಕುರಿತು ಹಿತನುಡಿಗಳನ್ನು ನುಡಿದರು. ಶಾಲಾ ಮಕ್ಕಳಿಗೆ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ಚಿತ್ರಕಲೆ, ಸಂಗೀತ, ನೃತ್ಯ ಏರ್ಪಡಿಸಲಾಗಿತ್ತು. ಗ್ರಾಮದ ದಾನಿಗಳು ನೀಡಿದ್ದ ಪೆನ್ನು ಪುಸ್ತಕಗಳು ಹಾಗೂ ಸಿಹಿ ತಿಂಡಿಗಳನ್ನು ವಿದ್ಯಾರ್ಥಿಗಳಿಗೆ ಹಂಚಲಾಯಿತು.
ಪೊನ್ನAಪೇಟೆ: ಕಿರುಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷ ಪುತ್ತಾಮನೆ ಜೀವನ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಎಸ್‌ಡಿಎಂಸಿ ಅಧ್ಯಕ್ಷ ಎಚ್. ಪಿ. ರಮೇಶ್, ಸದಸ್ಯರಾದ ಚಿರಿಯಪಂಡ ರೇಖಾ ಪೆಮ್ಮಯ್ಯ, ಪೆಮ್ಮಂಡ ರೀನಾ ದಯಾನಂದ್, ಮಾಜಿ ತಾಲೂಕು ಪಂಚಾಯಿತಿ ಸದಸ್ಯೆ ಸುನೀತಾ, ಮುಖ್ಯ ಶಿಕ್ಷಕಿ ರಾಜಮ್ಮ, ಶಿಕ್ಷಕರಾದ ವೀಣಾ, ಶ್ರೀಜ ಹಾಗೂ ಪೋಷಕರು ಹಾಜರಿದ್ದರು. ಮಕ್ಕಳಿಗೆ ಅಮೃತ ಮಹೋತ್ಸವದ ಪ್ರಯುಕ್ತ ನಡೆಸಲಾದ ಸ್ಪರ್ಧೆಗಳಿಗೆ ಬಹುಮಾನ ವಿತರಿಸಲಾಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಕರಿಕೆ: ನ್ಯೂ ಫ್ರೆಂಡ್ಸ್ ಯುವಕ ಸಂಘ ಚೆತ್ತುಕಾಯದ ನ್ಯೂ ಫ್ರೆಂಡ್ಸ್ ಯುವಕ ಸಂಘದಿAದ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಹಿರಿಯ ರಾದ ಕೆ.ಡಿ.ಬಾಲಕೃಷ್ಣ ನೆರವೇರಿಸಿದರು. ಈ ಸಂದರ್ಭ ಪದಾಧಿಕಾರಿಗಳು, ಗ್ರಾಮಸ್ಥರು ಹಾಜರಿದ್ದರು.
ಪೊನ್ನಂಪೇಟೆ: ಇಲ್ಲಿಗೆ ಸಮೀಪದ ನಡಿಕೇರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮಪಂಚಾಯಿತಿ ಸದಸ್ಯ ಆಲೆಮಾಡ ನವೀನ್ ಧ್ವಜಾರೋಹಣ ಮಾಡಿದರು. ಈ ಸಂದರ್ಭ ದಾನಿಗಳು, ಪೋಷಕರು, ಮುಖ್ಯ ಶಿಕ್ಷಕಿ ಶಾಂತಿ ಕುಮಾರಿ, ಸಹಶಿಕ್ಷಕಿ ಸೌಮ್ಯ ಹಾಗೂ ಅಡಿಗೆ ಸಿಬ್ಬಂದಿ ಇದ್ದರು.
ಕರಿಕೆ: ಕರಿಕೆ ಗ್ರಾಮ ಪಂಚಾಯಿತಿಯಲ್ಲಿ ಧ್ವಜ ರೋಹಣವನ್ನು ಪಂಚಾಯಿತಿ ಅಧ್ಯಕ್ಷೆ ಕಲ್ಪನಾ ಜಗದೀಶ್ ಅವರು ನೆರವೇರಿಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಾಲಚಂದ್ರ ನಾಯರ್, ಅಭಿವೃದ್ಧಿ ಅಧಿಕಾರಿ ಗಣಪತಿ, ಸದಸ್ಯರು , ಸಿಬ್ಬಂದಿಗಳು ಗ್ರಾಮಸ್ಥರು ಹಾಜರಿದ್ದರು.ಚೆಯ್ಯಂಡಾಣೆ: ಸ್ಥಳೀಯ ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ಧ್ವಜಾರೋಹಣವನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಚೇನಂಡ ಗಿರೀಶ್ ಪೂಣಚ್ಚ ನೆರವೇರಿಸಿದರು.
ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಆಡಳಿತ ಮಂಡಳಿ ಉಪಾಧ್ಯಕ್ಷ ಚೇಯಂಡ ಪೆಮ್ಮಯ್ಯ ವಹಿಸಿದ್ದರು. ದಿನದ ಮಹತ್ವದ ಕುರಿತು ಮುಖ್ಯ ಶಿಕ್ಷಕ ಮನೋಹರ್ ನಾಯ್ಕ್ ಹಾಗೂ ಶಿಕ್ಷಕಿ ಮಮತಾ ಮಾಹಿತಿ ಇತ್ತರು. ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ, ಭಾಷಣ, ಹಾಡು, ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಆಡಳಿತ ಮಂಡಳಿ ಕೋಶಾಧಿಕಾರಿ ಐ.ಕೆ. ಕಾರ್ಯಪ್ಪ, ಸಂಚಾಲಕ ಬಿ.ಸಿ. ಅಚ್ಚಯ್ಯ, ಪಿ.ಪಿ. ಪ್ರತಾಪ್, ಅಬ್ದುಲ್ ರಜಾಕ್ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು. ಕಾರ್ಯಕ್ರಮವನ್ನು ರವೀಂದ್ರ ನಾಥ್ ನಿರೂಪಿಸಿದರೆ, ಸ್ವಾಗತವನ್ನು ಪಿ.ಬಿ.ಪೊನ್ನಪ್ಪ ಹಾಗೂ ಹೇಮಮಾಲಿನಿ ವಂದನೆಯನ್ನು ಸಲ್ಲಿಸಿದರು.ಚೆಟ್ಟಳ್ಳಿ : ಚೆಟ್ಟಳ್ಳಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಎಸ್‌ಡಿಎಂಸಿ ಉಪಾಧ್ಯಕ್ಷೆ ಕಾವ್ಯ, ಧ್ವಜಾರೋಹಣ ನೆರವೇರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಟಿ ಮುತ್ತಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ, ಭಾಷಣ ನೆರವೇರಿತು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು. ವೇದಿಕೆಯಲ್ಲಿ ಚೆಟ್ಟಳ್ಳಿ ಗ್ರಾಮಪಂಚಾಯಿತಿಯ ಉಪಾಧ್ಯಕ್ಷೆ ವಿಮಲಾಕ್ಷಿ ಬಿ.ಆರ್., ಪಂಚಾಯಿತಿ ಸದಸ್ಯರಾದ ಮುಳ್ಳಂಡ ಅಂಜನ್ನ್ ಮುತ್ತಪ್ಪ, ಸುರೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಕೇಶ್, ಎಸ್‌ಡಿಎಂಸಿ ಅಧ್ಯಕ್ಷ, ವೈದ್ಯಾಧಿಕಾರಿ ಗೌತಮ್, ಪತ್ರಕರ್ತರಾದ ಪುತ್ತರಿರ ಕರುಣ್ ಕಾಳಯ್ಯ , ಪುತ್ತರಿರ ಪಪ್ಪು ತಿಮ್ಮಯ್ಯ, ಇಸ್ಮಾಯಿಲ್ ಕಂಡಕರೆ ಇದ್ದರು.
ವಿದ್ಯಾರ್ಥಿಗಳು ಪ್ರಾರ್ಥಿಸಿ ಶಾಲಾ ಮುಖ್ಯ ಶಿಕ್ಷಕಿ ರಮಾ ಸ್ವಾಗತಿ ಶಿಕ್ಷಕಿ ಜಾಲಿ ಜೋಸ್ವಿನ್ ವಂದಿಸಿ, ಶಿಕ್ಷಕರಾದ ಅಶೋಕ್ ಹಾಗೂ ಡೀನಾ ನಿರೂಪಿಸಿದರು. ಚೆಟ್ಟಳ್ಳಿ ಗ್ರಾಮಪಂಚಾಯಿತಿಯ ಉಪಾಧ್ಯಕ್ಷ ವಿಮಲಾಕ್ಷಿ ಬಿ.ಆರ್, ಪಂಚಾಯಿತಿ ಸದಸ್ಯರಾದ ಮುಳ್ಳಂಡ ಅಂಜನ್ನ್ ಮುತ್ತಪ್ಪ, ಸುರೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಕೇಶ್, ವೈದ್ಯಾಧಿಕಾರಿ ಗೌತಮ್ ,ಪತ್ರಕರ್ತರಾದ ಪುತ್ತರಿರ ಕರುಣ್ ಕಾಳಯ್ಯ, ಪುತ್ತರಿರ ಪಪ್ಪು ತಿಮ್ಮಯ್ಯ, ಇಸ್ಮಾಯಿಲ್ ಕಂಡಕರೆ ಅವರುಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ಚೆಯ್ಯಂಡಾಣೆ: ಸ್ಥಳೀಯ ಸರಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ೭೫ನೇ ಸ್ವಾತಂತ್ರೊö್ಯÃತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಡಾ . ಉತ್ತಪ್ಪ ಭರತ್ ನೆರವೇರಿಸಿದರು. ಈ ಸಂದರ್ಭ ಅರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಇದ್ದರು.ಪೆರಾಜೆ: ಶಕ್ತಿ ಕೇಂದ್ರದ ವತಿಯಿಂದ ಬಿಜೆಪಿ ಕಚೇರಿಯ ಮುಂಭಾಗ ಧ್ವಜರೋಹಣ ನಡೆಯಿತು. ಈ ಸಂದರ್ಭ ಕೊಡಗು ಜಿಲ್ಲಾ ಕೃಷಿ ಮೋರ್ಚಾದ ಜಿಲ್ಲಾಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಗ್ರಾಮ ಪ್ರಮುಖ ನಂಜಪ್ಪ ನಿಡ್ಯಮಲೆ, ಸಹ ಪ್ರಮುಖ ಚಿನ್ನಪ್ಪ ಅಡ್ಕ, ಗ್ರಾಮ ಪಂಚಾಯಿತಿ ಸದಸ್ಯ ಸುಭಾಶ್ಚಂದ್ರ ಬಂಗಾರಕೋಡಿ ಹಾಗೂ ಗ್ರಾಮಸ್ಥರು ಹಾಜರಿದ್ದರು.
ವೀರಾಜಪೇಟೆ: ವೀರಾಜಪೇಟೆ ತಾಲೂಕು ಕಂದಾಯ ಇಲಾಖೆಯಲ್ಲಿ ಕಂದಾಯ ಪರಿವೀಕ್ಷಕ ಎಂ.ಎಲ್ ಹರೀಶ್ ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭ ಕಂದಾಯ ಇಲಾಖೆಯ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು.
ಸಿದ್ದಾಪುರ: ನೆಲ್ಯಹುದಿಕೇರಿ ಗ್ರಾ.ಪಂ ವತಿಯಿಂದ ಸ್ವಾತಂತ್ರö್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣವನ್ನು ನೆಲ್ಯಹುದಿಕೇರಿ ಗ್ರಾಮದ ನಿವಾಸಿ ಮಾಜಿ ಯೋಧ ಹರಿದಾಸ್ ನೆರವೇರಿಸಿದರು.
ಈ ಸಂದರ್ಭ ಗ್ರಾ.ಪಂ ಅಧ್ಯಕ್ಷ ಸಾಬು ವರ್ಗೀಸ್ ಮಾತನಾಡಿ ಸ್ವಾತಂತ್ರö್ಯ ದಿನಾಚರಣೆಯ ಸಂಭ್ರಮದಲ್ಲಿರುವ ನಾವೆಲ್ಲರೂ ಇಂದು ದೇಶಕ್ಕೆ ಸ್ವಾತಂತ್ರö್ಯ ತಂದು ಕೊಟ್ಟ ಮಹಾನ್ ಹೋರಾಟಗಾರರನ್ನು ಸ್ಮರಿಸಬೇಕೆಂದು ಕರೆ ನೀಡಿದರು. ಗ್ರಾ.ಪಂ ಪಿಡಿಓ ಅನಿಲ್ ಕುಮಾರ್ ಮಾತನಾಡಿ ನಾವಿಂದು ಸ್ವಾತಂತ್ರö್ಯ ದಿನವನ್ನು ಆಚರಿಸಲು ಸ್ವಾತಂತ್ರö್ಯ ಹೋರಾಟಗಾರರು ಹಾಗೂ ಯೋಧರೇ ಕಾರಣ ಎಂದರು.
ಕಾರ್ಯಕ್ರಮದ ಅಂಗವಾಗಿ ನೆಲ್ಯಹುದಿಕೇರಿ ಗ್ರಾಮದಲ್ಲಿ ವಾಸಿಸುತ್ತಿರುವ ನಿವೃತ ಯೋಧರು ಹಾಗೂ ಸೇವೆಯಲ್ಲಿರುವ ಯೋಧರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ನೆಲ್ಯಹುದಿಕೇರಿ ಗ್ರಾ.ಪಂ ಉಪಾಧ್ಯಕ್ಷೆ ದಮಯಂತಿ, ಗ್ರಾ.ಪಂ ಸದಸ್ಯರುಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಪೆರಾಜೆ: ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಧ್ವಜಾರೋಹಣವನ್ನು ಜಿಲ್ಲಾ ಕೃಷಿ ಮೋರ್ಚಾ ಅಧ್ಯಕ್ಷ ಹಾಗೂ ಪೆರಾಜೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ನೆರವೇರಿಸಿದರು. ಈ ಸಂದರ್ಭ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾದ ಅಶೋಕ್ ಪೆರುಮುಂಡ, ಸಂಘದ ನಿರ್ದೇಶಕರು, ಸಿಬ್ಬಂದಿ ವರ್ಗದವರು ಸೇರಿದಂತೆ ಗ್ರಾಮಸ್ಥರು ಇದ್ದರು.
ಕೂಡಿಗೆ : ಕೂಡಿಗೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಧ್ವಜಾರೋಹಣವನ್ನು ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್ ನೆರವೇರಿಸಿದರು. ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಈ ಸಂದರ್ಭ ಗ್ರಾ.ಪಂ. ಸದಸ್ಯರುಗಳಾದ ಟಿ.ಪಿ. ಹಮೀದ್, ಕೆ.ಟಿ. ಗಿರೀಶ್, ಶಿವಕುಮಾರ್, ಅನಂತ್, ಚಂದ್ರು, ಅಭಿವೃದ್ಧಿ ಅಧಿಕಾರಿ ಎಂ.ಕೆ. ಆಯಿಷಾ ಸೇರಿದಂತೆ ಸದಸ್ಯರು, ಸಿಬ್ಬಂದಿ ವರ್ಗದವರು ಮತ್ತು ಸಾರ್ವಜನಿಕರು ಹಾಜರಿದ್ದರು.
ಕಡಂಗ: ಸ್ಥಳೀಯ ಬದ್ರಿಯಾ ಸುನ್ನಿ ಮಸೀದಿ ಹಾಗೂ ಮದರಸ, ಎಸ್‌ವೈಎಸ್, ಎಸ್‌ಎಸ್‌ಎಫ್ ಕರ್ನಾಟಕ ಮುಸ್ಲಿಂ ಜಮಾಅತ್ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರö್ಯ ಅಮೃತ ಮಹೋತ್ಸವವನ್ನು ಆಚರಿಸಲಾಯಿತು.
ಧ್ವಜಾರೋಹಣವನ್ನು ಬದ್ರಿಯಾ ಮಸೀದಿ ಅಧ್ಯಕ್ಷ ಸುಲೈಮಾನ್ ಸಿ.ಎಂ. ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮದರಸ ಮುಖ್ಯೋಪಾಧ್ಯಾಯ ಹಾರಿಸ್ ಬಯಾನಿ ದಿನದ ಮಹತ್ವದ ಕುರಿತು ಮಾತನಾಡಿದರು.
ಎಸ್‌ವೈಎಸ್ ಇಸಬಾ ಕಾರ್ಯಕರ್ತ ಅಬ್ದುಲ್ ಸಲಾಂ, ಬದ್ರಿಯಾ ಮಸೀದಿಯ ಕಾರ್ಯದರ್ಶಿ ಆಶಿಕ್,ಕೋಶಾಧಿಕಾರಿ ರಂಶೀದ್, ಎಸ್‌ವೈ ಎಸ್ ಪ್ರಧಾನ ಕಾರ್ಯದರ್ಶಿ ಅಶ್ರಫ್, ಕೋಶಾಧಿಕಾರಿ ರಜಾಕ್, ಕರ್ನಾಟಕ ಮುಸ್ಲಿಂ ಜಮಾಅತ್‌ನ ಪ್ರಧಾನ ಕಾರ್ಯದರ್ಶಿ ನಿಝರ್,ಇಸ್ಮಾಯಿಲ್ ಹಾಜಿ, ಹಸೈನಾರ್ ಕೆ.ಜಿ., ಎಸ್‌ಎಸ್‌ಎಫ್‌ನ ನೌಶಾದ್ ಸಿ.ಎಂ., ರಜಾಕ್ ಮುಸ್ಲಿಯಾರ್, ಷಂಶುದ್ದೀನ್, ರಶೀದ್ ಐಬಿಎಂ, ಫಿರೋಜ್, ರಜಾಕ್ ಆಟೋ, ಅಶ್ರಫ್ ಹಾಗೂ ವಿದ್ಯಾರ್ಥಿಗಳು ಇದ್ದರು.ಕಡಂಗ: ಸ್ಥಳೀಯ ಆಟೋ ಸಂಘದ ವತಿಯಿಂದ ಸ್ವಾತಂತ್ರö್ಯದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಊರಿನ ಹಿರಿಯರಾದ ಕಿಟ್ಟು ಅಯ್ಯಣ್ಣ, ಪ್ರಸನ್ನ ತಮ್ಮಯ್ಯ, ಸುಬಿರ್, ಅರ್ಜುನ ಅವರ ಸಮ್ಮುಖದಲ್ಲಿ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಸನ್ನ ತಮ್ಮಯ್ಯ ಅವರು ಸ್ವಾತಂತ್ರö್ಯದಲ್ಲಿ ಪಾಲ್ಗೊಂಡAತಹ ವೀರರನ್ನು ಸದಾ ನೆನೆಯಬೇಕೆಂದರು.
ಕಾರ್ಯಕ್ರಮದಲ್ಲಿ ಆಟೋ ಚಾಲಕ ಸಂಘದ ಅಧ್ಯಕ್ಷ ಸುಗುಣ, ಚಾಲಕರಾದ ಹಂಸ, ಲೋಕೇಶ್, ಅಶೋಕ, ಆಸಿಫ್, ಬೋಪಣ್ಣ ಮತ್ತು ಗ್ರಾಮಸ್ಥರು ಪಾಲ್ಗೊಂಡರು.
ಪೊನ್ನAಪೇಟೆ: ಗೋಣಿಕೊಪ್ಪಲು ಕಾವೇರಿ ಎಜುಕೇಷನ್ ಸೊಸೈಟಿ, ಕಾವೇರಿ ಪದವಿ ಕಾಲೇಜು, ಕಾವೇರಿ ಪಾಲಿಟೆಕ್ನಿಕ್ ಕಾಲೇಜು ಹಾಗೂ ಕಾವೇರಿ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ೭೫ ನೇ ಸ್ವಾತಂತ್ರö್ಯ ಅಮೃತ ಮಹೋತ್ಸವವನ್ನು ಆಚರಿಸಲಾಯಿತು.
ಈ ಸಂದರ್ಭ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಿವೃತ್ತ ವಿಂಗ್ ಕಮಾಂಡರ್ ಚೇಂದಿರ ಕೆ.ಅಪ್ಪಣ್ಣ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಹಲವಾರು ದೇಶಭಕ್ತ ಸ್ವಾತಂತ್ರö್ಯ ಹೋರಾಟಗಾರರ ಬಲಿದಾನದಿಂದ ನಮಗೆ ಸ್ವಾತಂತ್ರ‍್ಯ ದೊರಕಿದೆ. ಅಂದು ದೊರಕಿದ ಸ್ವಾತಂತ್ರ‍್ಯವನ್ನು ಉಳಿಸಿಕೊಂಡು, ದೇಶದ ಸಾರ್ವಭೌಮತ್ವವನ್ನು ಕಾಪಾಡುವ ನಿಟ್ಟಿನಲ್ಲಿ ನಮ್ಮ ಸೈನಿಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು. ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಗೋಣಿಕೊಪ್ಪಲು ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಸಿ.ಕೆ.ಉತ್ತಪ್ಪ ಮಾತನಾಡಿ ಭ್ರಷ್ಟಾಚಾರ ಮುಕ್ತ ಭಾರತವನ್ನಾಗಿಸಲು ಯುವ ಜನತೆ ಪಣತೊಡಬೇಕು ಎಂದರು.
ಈ ಸಂದರ್ಭ ಕಾವೇರಿ ಪದವಿ ಪೂರ್ವ ಕಾಲೇಜಿನ ಪದವಿ ವಿದ್ಯಾರ್ಥಿಗಳು ದೇಶಭಕ್ತಿಗೀತೆಗೆ ನೃತ್ಯ ಮಾಡಿದರು. ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ನಡೆಸಲಾದ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಈ ಸಂಧರ್ಭ ಕಾವೇರಿ ಎಜುಕೇಷನ್ ಸೊಸೈಟಿ ಉಪಾಧ್ಯಕ್ಷ ಪ್ರೊ.ಎಂ.ಕೆ. ಮೊಣ್ಣಪ್ಪ, ಕಾರ್ಯದರ್ಶಿ ಕೆ.ಜಿ.ಉತ್ತಪ್ಪ, ನಿರ್ದೇಶಕರುಗಳಾದ ಪ್ರೊ.ಇಟ್ಟೀರ ಕೆ.ಬಿದ್ದಪ್ಪ, ಸಿ.ಎಂ.ಅಚ್ಚಯ್ಯ, ಕೆ.ಪಿ.ಬೋಪಣ್ಣ, ಫ್ಲೆöÊಯಿಂಗ್ ಆಫೀಸರ್ ಪ್ರಣವ್ ತಿಮ್ಮಯ್ಯ, ಸುಮಿತ ಅಪ್ಪಣ್ಣ, ಪದವಿ ಕಾಲೇಜು ಪ್ರಾಂಶುಪಾಲ ಎಂ.ಬಿ.ಕಾವೇರಪ್ಪ, ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಕೆ. ಶ್ರೀನಿವಾಸ್, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಸ್.ಎಸ್.ಮಾದಯ್ಯ, ಐಕ್ಯೂಎಸಿ ಸಂಚಾಲಕಿ ಪ್ರೊ.ಎಂ.ಎಸ್.ಭಾರತಿ, ಎನ್ ಸಿ ಸಿ, ಎನ್ ಎಸ್ ಎಸ್, ರೋವರ್ ರೇಂಜರ್ಸ್ ಅಧಿಕಾರಿಗಳು, ಉಪನ್ಯಾಸಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.