ಪೊನ್ನಂಪೇಟೆ, ಆ.೧೯: ದಕ್ಷಿಣ ಕೊಡಗು ಒಕ್ಕಲಿಗರ ಯುವ ವೇದಿಕೆ ವತಿಯಿಂದ ಕೋತೂರು ಗ್ರಾಮದ ಒಕ್ಕಲಿಗರ ಸಹಯೋಗದೊಂದಿಗೆ ಕೆಂಪೇಗೌಡ ಜಯಂತಿ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ ತಾ.೨೧ರಂದು ಕೋತೂರುವಿನಲ್ಲಿ ಆಯೋಜಿಸಲಾಗಿದೆ. ಪುರುಷರಿಗೆ ಹಗ್ಗ ಜಗ್ಗಾಟ ಮತ್ತು ವಾಲಿಬಾಲ್, ಮಹಿಳೆಯರಿಗೆ ಹಗ್ಗ ಜಗ್ಗಾಟ ಮತ್ತು ಥ್ರೋಬಾಲ್, ೫೦ ವರ್ಷ ಮೇಲ್ಪಟ್ಟ ಪುರುಷರು ಹಾಗೂ ಮಹಿಳೆಯರಿಗೆ ಕಣ್ಣಿಗೆ ಬಟ್ಟೆ ಕಟ್ಟಿ ನೀರು ತುಂಬಿದ ಬಲೂನ್ ಒಡೆಯುವ ಸ್ಪರ್ಧೆ, ೧೦ ರಿಂದ ೧೫ ವರ್ಷದೊಳಗಿನ ಮಕ್ಕಳಿಗೆ ಓಟದ ಸ್ಪರ್ಧೆ ಆಯೋಜಿಸಲಾಗಿದೆ. ಈ ಕ್ರೀಡಾಕೂಟದಲ್ಲಿ ಪೊನ್ನಂಪೇಟೆ ಮತ್ತು ವೀರಾಜಪೇಟೆ ತಾಲೂಕಿನ ಒಕ್ಕಲಿಗರು ಭಾಗವಹಿಸಬಹುದು ಎಂದು ದಕ್ಷಿಣ ಕೊಡಗು ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಲೋಹಿತ್ ಗೌಡ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಘದ ಖಜಾಂಚಿ ಕೆ.ಬಿ.ಪವನ್ ಕುಮಾರ್ ಅವರನ್ನು (೭೩೩೮೫೩೪೦೫೧) ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.