ಮಡಿಕೇರಿ, ಆ. ೧೯: ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್‌ಕ್ಲಬ್ ಸದಸ್ಯರಿಗೆ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ತಾ. ೨೧ ರಂದು ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಕೆ.ಕೆ. ರೆಜಿತ್ ಕುಮಾರ್ ತಿಳಿಸಿದ್ದಾರೆ.
ಪಂದ್ಯಾವಳಿಯನ್ನು ಸಮಾಜ ಸೇವಕ ತೇಲಪಂಡ ಶಿವಕುಮಾರ್ ನಾಣಯ್ಯ ಉದ್ಘಾಟಿಸಲಿದ್ದಾರೆ. ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಅಂರ‍್ರಾಷ್ಟಿçÃಯ ಹಿರಿಯ ಶಟಲ್ ಬ್ಯಾಡ್ಮಿಂಟನ್ ಆಟಗಾರ್ತಿ ತಾತಪಂಡ ಜ್ಯೋತಿ ಸೋಮಯ್ಯ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಗುರುಸ್ವಾಮಿ, ಕ್ರೀಡಾಕೂಟ ಸಂಚಾಲಕ ನವೀನ್ ಡಿಸೋಜ ಪಾಲ್ಗೊಳ್ಳಲಿದ್ದಾರೆ. ಪಂದ್ಯಾವಳಿಯಲ್ಲಿ ಗೆಲುವು ಸಾಧಿಸುವ ಆಟಗಾರರಿಗೆ ನಗದು ಹಾಗೂ ಟ್ರೋಫಿ ನೀಡಲಾಗುತ್ತದೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.