ಚೆಟ್ಟಳ್ಳಿ, ಆ. ೧೮: ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಐಕ್ಯೂಎಸಿ, ಮಾನವ ಹಕ್ಕುಗಳ ಸಮಿತಿ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ವತಿಯಿಂದ ೭೫ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಡಿಯಲ್ಲಿ, ನಶಾ ಮುಕ್ತ ಭಾರತ ಅಭಿಯಾನ್ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ ಕಾಲೇಜಿನ ಮಾನವ ಹಕ್ಕುಗಳ ಸಮಿತಿಯ ಸಂಚಾಲಕರು ಹಾಗೂ ರಾಜ್ಯಶಾಸ್ತç ವಿಭಾಗದ ಮುಖ್ಯಸ್ಥೆ ದಿವ್ಯ ಎಂ.ಬಿ. ಮಾದಕ ವಸ್ತುಗಳ ಸೇವನೆಯ ವಿರುದ್ಧದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಸಂಚಾಲಕರು ಹಾಗೂ ವಾಣಿಜ್ಯಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುನೀತಾ ಎಂ.ಎA. ಮಾತನಾಡಿ, ಇಂದಿನ ಯುವ ಸಮುದಾಯವು ಯಾವುದೇ ದುಶ್ಚಟಗಳಿಗೆ ಬಲಿಯಾಗದೇ ಆರೋಗ್ಯವಂತ ದೇಶವನ್ನು ನಿರ್ಮಿಸುವಲ್ಲಿ ತಮ್ಮ ಕೊಡುಗೆಯನ್ನು ನೀಡಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ಡೆನ್ಸಿ ಕೆ.ಎಂ. ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.