ಪೊನ್ನಂಪೇಟೆ, ಆ. ೧೮: ವೀರಾಜಪೇಟೆ ತಾಲೂಕು ಬಿಜೆಪಿ ಓಬಿಸಿ ಮೋರ್ಚಾ ವತಿಯಿಂದ ಗೋಣಿಕೊಪ್ಪಲಿನಲ್ಲಿ ವಿಭಜನ್ ವಿಭೀಷಿಕ್ ಸ್ಮೃತಿ ದಿವಸ್ ಮೌನ ಮೆರವಣಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇಲ್ಲಿನ ಆರ್‌ಎಂಸಿ ಆವರಣದಲ್ಲಿ ಭಾರತಾಂಭೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು.
ನಂತರ ಬಿಜೆಪಿ ಕಾರ್ಯಕರ್ತರು ಮುಖ್ಯ ರಸ್ತೆಯ ಮೂಲಕ ಉಮಾಮಹೇಶ್ವರಿ ದೇವಸ್ಥಾನದವರೆಗೆ ಮೆರವಣಿಗೆಯಲ್ಲಿ ತೆರಳಿದರು. ಈ ಸಂದರ್ಭ ತಾಲೂಕು ಬಿಜೆಪಿ ಓಬಿಸಿ ಮೋರ್ಚಾ ಅಧ್ಯಕ್ಷ ರಾಜೇಶ್, ತಾಲೂಕು ಬಿಜೆಪಿ ಅಧ್ಯಕ್ಷ ಚಲನ್ ಕುಮಾರ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಭೀಮಯ್ಯ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಕಿಲನ್ ಗಣಪತಿ, ತಾಲೂಕು ಬಿಜೆಪಿ ಉಪಾಧ್ಯಕ್ಷ ಗಿರಿ ಪೂವಣ್ಣ, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರವೀಣ್, ಜಿಲ್ಲಾ ಓಬಿಸಿ ಪ್ರಧಾನ ಕಾರ್ಯದರ್ಶಿ ಗಣೇಶ್, ಜಿಲ್ಲಾ ಮಹಿಳಾ ಮೋರ್ಚ ಅಧ್ಯಕ್ಷೆ ಶರೀನ್ ಸುಬ್ಬಯ್ಯ, ತಾಲೂಕು ಒಬಿಸಿ ಪ್ರಧಾನ ಕಾರ್ಯದರ್ಶಿಗಳಾದ ವಿನೋದ್ ಪೂಜಾರಿ, ನವೀನ್ ಉತ್ತಯ್ಯ, ತಾಲೂಕು ಓಬಿಸಿ ಉಪಾಧ್ಯಕ್ಷ ಬಿ.ಎನ್. ಪ್ರಕಾಶ್ ಹಾಗೂ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.