ಮಡಿಕೇರಿ, ಆ. ೧೯ : ಇದುವರೆಗೆ ದಾಖಲೆ ಇಲ್ಲದಿರುವ ಶಾಲಾ-ಕಾಲೇಜುಗಳ ದಾಖಲೆಗಳನ್ನು ಸರಿಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರ ಜೊತೆ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ ಸಂಬAಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಇನ್ನೂ ಸಹ ಹಲವು ಶಾಲಾ-ಕಾಲೇಜಿಗೆ ಆರ್‌ಟಿಸಿ ಅಥವಾ ೯/೧೧ ಇ-ಸ್ವತ್ತು ಇಲ್ಲದಿರುವ ಬಗ್ಗೆ ಮಾಹಿತಿ ಇದೆ. ದಾಖಲೆಗಳನ್ನು ಸರ್ಕಾರಿ/ ಸಂಸ್ಥೆಯ ಹೆಸರಿಗೆ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.
೧೮ ವರ್ಷ ಮೇಲ್ಪಟ್ಟವರು ಮತದಾರರ ಗುರುತಿನ ಚೀಟಿ ಮಾಡಿಸದಿದ್ದಲ್ಲಿ ಆನ್‌ಲೈನ್ ಅಥವಾ ಮ್ಯಾನ್ಯುಯಲ್ ಮೂಲಕ ನೋಂದಣಿ ಮಾಡಬಹುದಾಗಿದೆ. ಆ ನಿಟ್ಟಿನಲ್ಲಿ ೧೮ ವರ್ಷ ಮೇಲ್ಪಟ್ಟವರೆಲ್ಲರೂ ಮತದಾರರ ಗುರುತಿನ ಚೀಟಿ ಪಡೆಯಲು ಮುಂದಾಗಬೇಕು. ಜೊತೆಗೆ ಮತದಾರರ ಗುರುತಿನ ಚೀಟಿ ಪಡೆದಿರುವವರೆಲ್ಲರೂ ಆಧಾರ್ ಲಿಂಕ್ ಮಾಡಿಸುವಂತಾಗಬೇಕು. ಆ ನಿಟ್ಟಿನಲ್ಲಿ ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ಕಾಳಜಿ ವಹಿಸಿ ಪ್ರಗತಿ ಸಾಧಿಸಲು ಶ್ರಮಿಸುವಂತೆ ನಿರ್ದೇಶನ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ ಅವರು ೧೮ ವರ್ಷ ಮೇಲ್ಪಟ್ಟ ಈಗಾಗಲೇ ಮತದಾರರ ಗುರುತಿನ ಚೀಟಿ ಪಡೆದಿರುವ ಎಲ್ಲಾ ವಿದ್ಯಾರ್ಥಿಗಳು ಆಧಾರ್ ಲಿಂಕ್ ಮಾಡಿಸಬೇಕು ಎಂದು ತಿಳಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು ಹಲವು ಕಾಲೇಜುಗಳ ದಾಖಲೆಯು ಪ್ರೌಢಶಾಲೆಯ ಮುಖ್ಯೋಪಾಧ್ಯಯರ ಹೆಸರಿನಲ್ಲಿದೆ ಎಂದು ಮಾಹಿತಿ ನೀಡಿದರು. ಜಿಲ್ಲೆಯ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಇದ್ದರು.