ಕೂಡಿಗೆ, ಆ. ೧೮: ಕುಶಾಲನಗರ ವಲಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕೂಡಿಗೆ ಸರಕಾರಿ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥö್ಯ ಸಂಕಲ್ಪ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ ವಹಿಸಿ, ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾವೇರಿ ನದಿ ಸ್ವಚ್ಛತಾ ಆಂದೋಲನ ರಾಜ್ಯ ಸಂಚಾಲಕ, ಕುಶಾಲನಗರ ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ಎಂ.ಎನ್. ಚಂದ್ರ‍್ರ ಮೋಹನ ಮಾತನಾಡಿ, ವಿದ್ಯಾರ್ಥಿಗಳು ಧೂಮಪಾನ, ಮದ್ಯಪಾನ ಮುಂತಾದ ದುಶ್ಚಟಗಳಿಂದ ದೂರ ಇದ್ದು, ಸಾಸ್ಥö್ಯ ಸಮಾಜ ನಿರ್ಮಾಣಕ್ಕೆ ಪಣತೊಡಬೇಕು ಎಂದರು.

ಕಾಲೇಜು ಪ್ರಾಂಶುಪಾಲ ಡಾ. ಬಸಪ್ಪ ಮಾತನಾಡಿ, ದುಶ್ಚಟಗಳನ್ನು ದೂರ ಇರಿಸಿ ಕ್ರೀಡೆ, ಯೋಗ ಇನ್ನಿತರ ಉತ್ತಮ ಹವ್ಯಾಸಗಳನ್ನು ಮೈಗೂಡಿಸಿಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಉತ್ತಮ ಭವಿಷ್ಯವನ್ನು ಕಟ್ಟಿಕೊಳ್ಳಬೇಕು ಎಂದರು.

ಧರ್ಮಸ್ಥಳ ಸಂಘದ ಮೇಲ್ವಿಚಾರಕಿ ಚೈತನ್ಯ ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಸೇವಾ ಪ್ರತಿನಿಧಿ ನಿರ್ಮಲ ಸ್ವಾಗತಿಸಿ ವಂದಿಸಿದರು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕ ವೃಂದವವರು ಭಾಗವಹಿಸಿದ್ದರು.