ಕರಿಕೆ, ಆ. ೨೦: ಇಲ್ಲಿನ ಸರಕಾರಿ ಆಯುರ್ವೇದ ಆಸ್ಪತ್ರೆಗೆ ಖಾಯಂ ವೈದ್ಯರನ್ನು ನೇಮಕಾತಿ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಮೂಲತಃ ದ.ಕ. ಜಿಲ್ಲೆಯ ಸುಳ್ಯ ತಾಲೂಕಿನವರಾದ ಡಾ. ಪಲ್ಲವಿ ಕೆ.ಸಿ. (ಬಿ.ಎ.ಎಂ.ಎಸ್) ಕರಿಕೆ ಸರಕಾರಿ ಆಯುರ್ವೇದ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿ ಪ್ರಭಾರ ವೈದ್ಯಾಧಿಕಾರಿಯಾಗಿದ್ದ ಡಾ. ಶುಭ ಅವರಿಂದ ಅಧಿಕಾರ ವಹಿಸಿಕೊಂಡರು.