*ಗೋಣಿಕೊಪ್ಪ, ಆ. ೨೦: ಜುಲೈ, ಆಗಸ್ಟ್ ತಿಂಗಳಿನಲ್ಲಿ ಸುರಿದ ಸತತ ಮಳೆಯಿಂದ ಜಿಲ್ಲೆಯ ಪ್ರಮುಖ ಬೆಳೆಗಳಾದ ಕಾಫಿ, ಮೆಣಸು, ಅಡಿಕೆ ಫಸಲು ಸಂಪೂರ್ಣ ನೆಲಕಚ್ಚಿದ್ದು, ಬೆಳೆಗಾರರಿಗೆ ಆರ್ಥಿಕ ಸಂಕಷ್ಟ ಎದುರಾಗಿದ್ದು, ಸಮರ್ಪಕ ಪ್ರಮಾಣದಲ್ಲಿ ಪರಿಹಾರ ಒದಗಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಹಿತರಕ್ಷಣಾ ಸಮಿತಿ ಅಧ್ಯಕ್ಷ ಕಟ್ಟಿಮಂದಯ್ಯ ಒತ್ತಾಯಿಸಿದ್ದಾರೆ.

ಗೋಣಿಕೊಪ್ಪ ಸಿಲ್ವರ್ ಸ್ಕೆöÊ ಸಭಾಂಗಣದಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು ನಷ್ಟ ಪರಿಹಾರಕ್ಕೆ ಸಂಬAಧಿಸಿದ ಇಲಾಖೆಗಳು ಸೂಕ್ತ ರೀತಿಯ ಸರ್ವೆ ನಡೆಸಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

ಪೊನ್ನಂಪೇಟೆ ತಾಲೂಕು ರಚನೆಯಾಗಿ ವರ್ಷ ಕಳೆದರೂ ಮೂಲಭೂತ ಸೌಕರ್ಯ ಒದಗಿಸಲು ಸಾಧ್ಯವಾಗಿಲ್ಲ. ಕಂದಾಯ ಇಲಾಖೆಗೆ ಸಂಬAಧಿಸಿದ ವಿಚಾರಗಳಿಗೆ ವೀರಾಜಪೇಟೆ ತಾಲೂಕಿಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ತಾವಳಗೇರಿ ಗ್ರಾಮದ ಮಚ್ಚಮಾಡ ಸತೀಶ್, ಪೊನ್ನಂಪೇಟೆ ತಾಲೂಕು ಉಪ ನೋಂದಾವಣಾಧಿ ಕಾರಿ ಸಾರ್ವಜನಿಕರಿಗೆ ಸ್ಪಂದಿಸುವ ಕಾರ್ಯ ನಿಭಾಯಿಸುತ್ತಿಲ್ಲ. ಅಲ್ಲದೇ ವಯಸ್ಕರಿಗೂ ಸೂಕ್ತ ರೀತಿಯಲ್ಲಿ ಸೇವೆ ಒದಗಿಸುವಲ್ಲಿ ವಿಫಲರಾಗಿದ್ದಾರೆ. ಸರಿಯಾದ ರೀತಿಯಲ್ಲಿ ಸೇವೆ ಸಿಗಲು ಟೋಕನ್ ವ್ಯವಸ್ಥೆಯನ್ನು ಜಾರಿಗೊಳಿ ಸಬೇಕೆಂದು ಒತ್ತಾಯಿಸಿದ್ದಾರೆ.