ಪೊನ್ನಂಪೇಟೆ, ಆ. ೧೯: ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಅಂರ್ರಾಷ್ಟಿçÃಯ ಯೋಗಪಟು ಚೊಟ್ಟೋಳಿಯಮ್ಮಂಡ ಅಮೃತ್ ರಾಕೇಶ್ ಅವರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಯೋಗ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಅಪ್ಪಚ್ಚ ಕವಿ ವಿದ್ಯಾಲಯ, ಸಾಯಿಶಂಕರ್ ವಿದ್ಯಾ ಸಂಸ್ಥೆ, ಪೊನ್ನಂಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಸರ್ಕಾರಿ ಪ್ರಾಥಮಿಕ ಶಾಲೆ ಸೇರಿದಂತೆ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿದ್ಯಾರ್ಥಿಗಳಿಗೆ ಪ್ರಾಣಾಯಾಮ, ಸೂರ್ಯ ನಮಸ್ಕಾರ ಸೇರಿದಂತೆ ವಿವಿಧ ಬಗೆಯ ಆಸನಗಳನ್ನು ಮಾಡಿಸಲಾಯಿತು. ವಿವಿಧ ಯೋಗ ಭಂಗಿಗಳನ್ನು ನೃತ್ಯಕ್ಕೆ ಅಳವಡಿಸಿಕೊಂಡು ವಿಭಿನ್ನ ರೀತಿಯಲ್ಲಿ ಯೋಗ ತರಬೇತಿ ನೀಡಲಾಯಿತು.
ಕರ್ನಾಟಕ ಸರ್ಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಸೆಪ್ಟೆಂಬರ್ ೨೪ ರಂದು ರಾಷ್ಟçಮಟ್ಟದಲ್ಲಿ ನಡೆಯಲಿರುವ ಯೋಗಥಾನ್ನಲ್ಲಿ ಗಿನ್ನಿಸ್ ದಾಖಲೆ ಮಾಡುವ ಉದ್ದೇಶದಿಂದ ಯೋಗ ತರಬೇತಿಯನ್ನು ನೀಡಲಾಗುತ್ತಿದೆ ಎಂದು ಯೋಗ ಪಟು ಅಮೃತ್ ರಾಕೇಶ್ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಗುರುಸ್ವಾಮಿ, ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಕಾಳಿಮಾಡ ಮೋಟಯ್ಯ, ನಿರ್ದೇಶಕಿ ಮೂಕಳೇರ ಕಾವ್ಯ ಮಧು ಹಾಜರಿದ್ದರು.