ಕುಶಾಲನಗರ, ಆ.೨೦: ಕೊಡಗು ಜಿಲ್ಲೆಯ ಶಾಸಕರುಗಳಿಗೆ ಹೆಚ್ಚಿನ ಭದ್ರತೆ ಒದಗಿಸಲು ಸರ್ಕಾರ ಸೂಚನೆ ನೀಡಿದೆ. ಕೊಡಗು ಜಿಲ್ಲೆಯಲ್ಲಿ ಇತ್ತೀಚಿಗೆ ನಡೆದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬAಧಿಸಿದAತೆ ಇಂತಹ ಘಟನೆ ಮರುಕಳಿಸÀದಂತೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ವಿಕಾಸ ಸೌಧದ ಮೂರನೇ ಮಹಡಿಯಲ್ಲಿರುವ ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ಕೊಠಡಿ ಸಂಖ್ಯೆ ೩೫೬ ಮತ್ತು ಎರಡನೇ ಮಹಡಿಯಲ್ಲಿರುವ ವೀರಾಜಪೇಟೆ ಕ್ಷೇತ್ರ ಶಾಸಕ ಕೆ.ಜಿ. ಬೋಪಯ್ಯ ಅವರ ೨೮೯ ಸಂಖ್ಯೆಯ ಕೊಠಡಿಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ ಎಂದು ತಿಳಿದು ಬಂದಿದೆ.

ಕೊಡಗು ಜಿಲ್ಲೆಯ ಜನಪ್ರತಿನಿಧಿಗಳು ಜಿಲ್ಲೆ ಮತ್ತು ಹೊರ ಜಿಲ್ಲೆಗಳಲ್ಲಿ ಪ್ರವಾಸ ಸಂದರ್ಭ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯಾಗಿ ಹೆಚ್ಚುವರಿ ಭದ್ರತೆ ಕಲ್ಪಿಸುವಂತೆ

ಗೃಹ ಸಚಿವಾಲಯ ಸೂಚನೆ ನೀಡಿದೆ.

ಈ ನಡುವೆ ವಿರೋಧ ಪಕ್ಷ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೆಚ್ಚುವರಿ ಭದ್ರತಾ ವ್ಯವಸ್ಥೆ ಮಾಡಿ ಮುಖ್ಯಮಂತ್ರಿಗಳು ಆದೇಶ ನೀಡಿದ್ದಾರೆ.

- ಚಂದ್ರಮೋಹನ್