ಸಿದ್ದಾಪುರ, ಆ. ೨೦: ಒಲೆ ಉರಿಸುವ ಸಂದರ್ಭ ಆಕಸ್ಮಿಕವಾಗಿ ಬೆಂಕಿ ತಗುಲಿ ಯುವಕ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಇಂಜಲಗೆÀರೆಯಲ್ಲಿ ನಡೆದಿದೆ.

ಇಂಜಲಗೆರೆಯ ಕಲ್ಲುಕೋರೆ ನಿವಾಸಿ ಶಶಿ ಎಂಬವರ ಪುತ್ರ ನಿತಿನ್ (೨೬) ಶನಿವಾರ ಮಧ್ಯಾಹ್ನ ಮನೆಯಲ್ಲಿ ಡೀಸೆಲ್ ಬಳಸಿ ಒಲೆ ಉರಿಸುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಸಂಪೂರ್ಣ ಮೈಗೆ ಬೆಂಕಿ ಆವರಿಸಿದೆ. ಬೆಂಕಿಯಿAದಾಗಿ ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿತಿನ್ ಕೊನೆಯುಸಿgಳೆೆದಿದ್ದಾರೆ. ಮೃತ ನಿತಿನ್ ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ.

ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. - ವಾಸು