ಮಡಿಕೇರಿ, ಆ. ೨೦: ನಗರದ ಶ್ರೀ ಕಂಚಿ ಕಾಮಾಕ್ಷಿ ದೇವಾಲಯ ಆವರಣದಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ನಡೆಯಿತು. ಸ್ಪರ್ಧಿಗಳಾಗಿ ಮಧು ಹಾಗೂ ಮಹೇಶ್ ಪಾಲ್ಗೊಂಡಿದ್ದರು.
ಶ್ರೀಕೃಷ್ಣನ ಪಾತ್ರ ಪ್ರಮುಖ
ಭಗವದ್ಗೀತೆಯಲ್ಲಿ ಶ್ರೀಕೃಷ್ಣನ ಪಾತ್ರ ಪ್ರಮುಖವಾಗಿದ್ದು, ಕೃಷ್ಣ ಜನ್ಮಾಷ್ಟಮಿಯ ಸುಸಂದರ್ಭದಲ್ಲಿ ನಾಡಿನೆಲ್ಲೆಡೆ ಸುಖ, ಶಾಂತಿ, ನೆಮ್ಮದಿ ನೆಲೆಸುವಂತಾಗಲಿ ಎಂದು ಶಾಸಕ ಕೆ.ಜಿ. ಬೋಪಯ್ಯ ಆಶಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದ ಆವರಣದಲ್ಲಿ ನಡೆದ ಶ್ರೀ ಕೃಷ್ಣ ಜನ್ಮಾಷ್ಟಾಮಿ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಪನ್ಯಾಸ ನೀಡಿದ ಚಿ.ನಾ. ಸೋಮೇಶ್ ಅವರು ಶ್ರೀಕೃಷ್ಣ ನೀಡಿರುವ ಕೊಡುಗೆಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದರು.
ಅನೇಕ ಪವಾಡಗಳು ಮತ್ತು ಲೀಲೆಗಳಿಂದ ದೈವೀಪುರುಷನಾಗಿ ಶ್ರೀಕೃಷ್ಣ ದೇವರನ್ನು ಸ್ಮರಿಸಲಾಗುತ್ತದೆ. ದುಷ್ಟರ ಶಿಕ್ಷಕ, ಶಿಷ್ಟರ ರಕ್ಷಕ ಹೀಗೆ ವಿವಿಧ ಅವತಾರಗಳಿಂದ ಜನಮಾನಸ ದಲ್ಲಿ ಉಳಿದಿರುವ ಶ್ರೀಕೃಷ್ಣನ ನಾಮದ ಅರ್ಥಗಳು ಹಲವು. ಶ್ರೀಕೃಷ್ಣ ಸ್ಮರಣೆಯಿಂದ ಸಂತಸ, ಸಡಗರ, ಹರ್ಷ ಉಲ್ಲಾಸ ಉಂಟಾಗುತ್ತದೆ ಎಂದರು.
ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಶ್ರೀ ಕಂಚಿ ಕಾಮಾಕ್ಷಮ್ಮ ದೇವಾಲಯ ಸಮಿತಿಯ ಅಧ್ಯಕ್ಷ ರವಿಕುಮಾರ್, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ಅವರು ಮಾತನಾಡಿದರು.
ಕಾರ್ಯಕ್ರಮಕ್ಕೂ ಮೊದಲು ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಸಮಿತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ನಗರಸಭಾ ಸದಸ್ಯರಾದ ಮಹೇಶ್ ಜೈನಿ, ಉಮೇಶ್ ಸುಬ್ರಮಣಿ, ಶ್ವೇತಾ ಇತರರು ಇದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕÀ ಚಿನ್ನಸ್ವಾಮಿ ಸ್ವಾಗತಿಸಿದರು, ಜಯಲಕ್ಷಿö್ಮ ನಿರೂಪಿಸಿದರು. ರಘುರಾಮ್ ವಂದಿಸಿದರು.